Friday, November 22, 2024

ನಕಲಿ ದಾಖಲೆ ಸೃಷ್ಠಿಸಿ ಆಸ್ತಿ ಮಾರಾಟ ಮಾಡ್ತಿದ್ದ​ ಆರೋಪಿಗಳು​ ಬಂಧನ

ಮೈಸೂರು: ಜಿಲ್ಲೆಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ಆಸ್ತಿಗಳ ಪರಭಾರೆ, ಹಾಗು ಯಾರದೋ ಆಸ್ತಿಯನ್ನು ಮತ್ಯಾರಿಗೋ ಮಾರಾಟ ಮಾಡುತ್ತಿದ್ದ ಜಾಲವನ್ನು ಮೈಸೂರಿನ ನಗರ ಪೊಲೀಸರು ಇಂದು ಬಂಧಿಸಿದ್ದಾರೆ.

ಡಿಸಿಪಿ ಪ್ರದೀಪ್‍ಗುಂಟಿ ನೇತೃತ್ವದಲ್ಲಿ ದಾಳಿ ನಡೆದಿದ್ದು ಈ ವೇಳೆ ಅಧಿಕಾರಿಗಳ ನಕಲಿ ಸೀಲ್, ಸಿಗ್ನೇಚರ್ ಪತ್ತೆಯಾಗಿವೆ. ಅಪಾರ ಪ್ರಮಾಣದ ಮುಡಾ, ಪಾಲಿಕೆ ಸೇರಿ‌ ಸರ್ಕಾರಿ ಅಧಿಕಾರಿಗಳ ನಕಲಿ ದಾಖಲಾತಿಗಳು ಪತ್ತೆಯಾಗಿವೆ.

ಸರ್ಕಾರಿ ಹಾಗೂ ಖಾಸಗಿ ಆಸ್ತಿಗಳಿಗೆ ನಕಲಿ ಮಾಲೀಕರನ್ನು ಸೃಷ್ಟಿಸಿ ಬ್ಯಾಂಕ್‍ನಲ್ಲಿ ಸಾಲ ಪಡೆಯುತ್ತಿದ್ದ ಜಾಲವೆಂದು ತಿಳಿದು ಬಂದಿದೆ. ಈ ವಂಚಕರು ಶಾಸಕ ರಿಜ್ವಾನ್ ಹರ್ಷದ್ ತಂದೆಯ ಆಸ್ತಿಗೆ ನಕಲಿ ಮಾಲೀಕನನ್ನು ಸೃಷ್ಟಿಸಿ ಮಾರಾಟ ಮಾಡಿದ್ದರು. ಅದಲ್ಲದೆ ಮೈಸೂರಿನ ಯಾದವಗಿರಿಯಲ್ಲಿರುವ 80×100 ಅಳತೆಯ ಮುಡಾಗೆ ಸೇರಿದ ನಿವೇಶನದ ಮೇಲೆ ಬ್ಯಾಂಕ್‍ನಲ್ಲಿ ಸಾಲ ಪಡೆಯಲು ಪ್ರಯತ್ನಿಸಿದ್ದರು ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ.

RELATED ARTICLES

Related Articles

TRENDING ARTICLES