ಮೈಸೂರು : ಅರಮನೆ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮ ಮನೆ ಮಾಡಿದೆ. ದಸರೆಗೆ ಭರ್ಜರಿ ತಾಲೀಮು ನಡೆಯುತ್ತಿದೆ. ಇದರ ನಡುವೆ ದಸರೆಗೆ ಕಾಡಿನಿಂದ ನಾಡಿಗೆ ಆಗಮಿಸಿದ್ದ ಲಕ್ಷ್ಮಿ ಎಂಬ ಆನೆ ನಿನ್ನೆ ಅರಮನೆ ಕೋಡಿ ಸೋಮೇಶ್ವರ ದೇಗುಲದ ಬಳಿ ಗಂಡು ಮರಿಗೆ ಜನ್ಮ ನೀಡಿದೆ.
ಲಕ್ಷ್ಮಿ ಆನೆ ಹಾಗೂ ಮರಿಯನ್ನು ಅಧಿಕಾರಿಗಳು ಪ್ರತ್ಯೇಕವಾಗಿರಿಸಿದ್ದಾರೆ. ಸುರಕ್ಷತಾ ದೃಷ್ಟಿಯಿಂದ ಅರಮನೆಯಲ್ಲೇ ಲಕ್ಷ್ಮಿ ಆನೆ ಹಾಗೂ ಮರಿಯನ್ನು ಪ್ರತ್ಯೇಕವಾದ ವ್ಯವಸ್ಥೆ ಮಾಡಿ ಇಡಲಾಗಿದೆ. ಮಾಧ್ಯಮದವರು ಸೇರಿ ಯಾರು ಆನೆ ಹಾಗೂ ಮರಿ ಹತ್ತಿರ ಹೋಗದಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಮುಂದಿನ ದಿನದಲ್ಲಿ ಫೋಟೋ ವಿಡಿಯೋ ನಾವೇ ಕೊಡುವುದಾಗಿ DCF ಡಾ.ಕರಿಕಾಳನ್ ತಿಳಿಸಿದ್ದಾರೆ. ಇನ್ನೂ ರಾಂಪುರ ಆನೆ ಶಿಬಿರದಲ್ಲಿ ಲಕ್ಷ್ಮಿ ಅರ್ಜುನ ಆನೆ ಜೊತೆ ಸೇರಿತ್ತು. ತಾಯಿ ಆನೆ ಲಕ್ಷ್ಮಿ ಮತ್ತು ಮರಿ ಆನೆ ಎರಡು ಆರೋಗ್ಯವಾಗಿವೆ. 15 ವರ್ಷದ ಹಿಂದೆ ದಸರೆಗೆ ಬಂದಿದ್ದ ಸರಳ ಸಹಾ ಅರಮನೆಯಲ್ಲೇ ಮರಿಗೆ ಜನ್ಮ ನೀಡಿತ್ತು. ಸರಳ ಜನ್ಮ ನೀಡಿದ ಮರಿಗೆ ಚಾಮುಂಡಿ ಎಂದು ಹೆಸರಿಡಲಾಗಿತ್ತು.