ಬೆಂಗಳೂರು: ನನಗೆ ನ್ಯಾಯಾಂಗದ ಮೇಲೆ ವಿಶ್ವಾಸ ಇದೆ, ಈ ಆರೋಪದಲ್ಲಿ ಯಾವುದೇ ಯಾವುದೇ ಸತ್ಯಾಂಶ ಇಲ್ಲ. ಆ ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಭ್ರಷ್ಟಾಚಾರ ಆರೋಪಗಳು ಸಾಮಾನ್ಯವಾಗಿ ಇರೋದು, ಇದಕ್ಕೆ ನಾನು ತಲೆ ಕೆಡಿಸಿಕೊಳ್ಳೋದಕ್ಕೆ ಹೋಗಲ್ಲ. ಇದರಲ್ಲಿ ಸತ್ಯಾಂಶ ಏನು ಇಲ್ಲ ಎಂದು ಬಿಎಸ್ವೈ ಸ್ಪಷ್ಟನೆ ನೀಡಿದ್ದಾರೆ.
ಇಂದು ಯಡಿಯೂರಪ್ಪ ಅವರ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಬಗ್ಗೆ ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಾಹಂ ಅವರು 2021 ರಲ್ಲಿ ದೂರು ಕೊಟ್ಟಿದ್ದರು. ಆದರೆ ಇಲ್ಲಿವರೆಗೂ ಯಾವುದೇ ಕ್ರಮ ವಹಿಸದ ಹಿನ್ನಲೆಯಲ್ಲಿ ಇಂದು ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸ್ ಇನ್ಸ್ ಪೆಕ್ಟರ್ ಗೆ ಜನಪ್ರತಿನಿಧಿ ವಿಶೇಷ ನ್ಯಾಯಾಲಯದಿಂದ ಆದೇಶಿಸಿದೆ.
ಬಿ.ಎಸ್ ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಶಶಿಧರ ಮರಡಿ, ಸಂಜಯ್ ಶ್ರೀ, ಚಂದ್ರಕಾಂತ ರಾಮಲಿಂಗಮ್, ಎಸ್.ಟಿ.ಸೋಮಶೇಖರ್, ಡಾ.ಜಿ.ಸಿ.ಪ್ರಕಾಶ್, ಕೆ.ರವಿ, ವಿರುಪಾಕ್ಷಪ್ಪ ಯಮಕನಮರಡಿ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿತ್ತು.