ಬಳ್ಳಾರಿ: ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಕಡಿತದಿಂದ ಮೂರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಮ್ಸ್ ನಿರ್ದೇಶಕ ಡಾ.ಗಂಗಾಧರ ಗೌಡ ಅವರು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.
ಇಂದು ವಿಮ್ಸ್ ಆಸ್ಪತ್ರೆಯಲ್ಲಿ ಆಗಿರುವ ಸಾವುಗಳು ವಿವಿಧ ತೀವ್ರತರದ ಆರೋಗ್ಯ ಸಮಸ್ಯೆ ಗಳಿಂದ ಸಂಭವಿಸಿವೆ. ಒಬ್ಬ ರೋಗಿಯು ವಿಷಪೂರಿತ ಹಾವಿನ ಕಡಿತದಿಂದ ದೇಹದಲ್ಲಿ ಆಂತರಿಕ ರಕ್ತಸ್ರಾವವಾಗಿ ಸಾವಿಗೀಡಾಗಿದ್ದರೆ, ಇನ್ನೊಬ್ಬರು ಬಹು ಅಂಗಾಗ ವೈಫಲ್ಯದಿಂದ ಹಾಗೂ ಮೂರನೇ ವ್ಯಕ್ತಿ ಮೆದುಳಿನ ರಕ್ತಸ್ರಾವದಿಂದ ಮೃತಪಟ್ಟಿರುತ್ತಾರೆ ಎಂದು ವಿಮ್ಸ್ ಸ್ಪಷ್ಟಪಡಿಸಿದೆ.
ವಿಮ್ಸ್ ಆಸ್ಪತ್ರೆಯು ಉನ್ನತ ಚಿಕಿತ್ಸಾ ಕೇಂದ್ರವಾಗಿದ್ದು, ಚಿಕಿತ್ಸೆ ಫಲಕಾರಿಯಾಗದಿದ್ದಲ್ಲಿ ಕೊನೆಗೆ ಪರಿಸ್ಥಿತಿ ಉಲ್ಬಣಗೊಂಡ ನಂತರ ವಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ಬರುವುದರಿಂದ ಇಂತಹ ಸಾವುಗಳು ಆಗುವ ಸಂಭವನೀಯತೆ ಹೆಚ್ಚಾಗುತ್ತಿದೆ.
ಈ ಮೂವರು ಮೊದಲೇ ಸಾವೀಗಿಡಾಗಿದ್ದಾರೆ. ಇದೇ ವೇಳೆಯಲ್ಲಿ ವಿದ್ಯುತ್ ಸಂಪರ್ಕ ಕೈಕೊಟ್ಟಿರುವುದು ಕಾಕತಾಳೀಯವಾಗಿದ್ದು, ವಿಮ್ಸ್ ಆಸ್ಪತ್ರೆ ಯಾವಾಗಲೂ ರೋಗಿಗಳ ಹಿತಕ್ಕಾಗಿ ಕಾರ್ಯನಿರ್ವಹಿಸುತ್ತದೆ ಎಂದು ಈ ಮೂಲಕ ಸಾರ್ವಜನಿಕರಿಗೆ ಹಾಗೂ ಮಾಧ್ಯಮಗಳಿಗೆ ಸ್ಪಷ್ಟೀಕರಣ ನೀಡುತ್ತೇನೆ ಎಂದು ವಿಮ್ಸ್ ನಿರ್ದೇಶಕ ಡಾ.ಗಂಗಾಧರ ಗೌಡ ಹೇಳಿದ್ದಾರೆ.