ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ಇಡಿ ಸಮನ್ಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ ಎಂದು ಡಿಕೆಶಿ ಹೇಳಿಕೊಂಡಿದ್ದಾರೆ. ಈ ಮೂಲಕ ಡಿಕೆ ಶಿವಕುಮಾರ್ ವಿಚಾರಣೆ ಎದುರಿಸಿ ಬಂಧನವಾಗುವ ಸಾಧ್ಯತೆ ಎದುರಾಗಿದೆ.
ಭಾರತ್ ಜೋಡೋ, ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಮಧ್ಯೆಯೇ ಮತ್ತೊಮ್ಮೆ ಇಡಿ ನನಗೆ ಸಮನ್ಸ್ ನೀಡಿದೆ. ನಾನು ಸಹಕರಿಸಲು ಸಿದ್ಧ ಎಂದಿದ್ದಾರೆ. ಆದರೆ, ಈ ಸಮನ್ಸ್ ನೀಡಿರುವ ಸಮಯ, ಹಾಗೂ ಮೇಲಿಂದ ಮೇಲೆ ನೀಡುತ್ತಿರುವ ಕಿರುಕುಳದಿಂದಾಗಿ ನನ್ನ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ತೊಂದರೆಯಾಗುತ್ತಿದೆ ಎಂದು ಹೇಳಿದ್ದಾರೆ.
ವಿಚಾರಣೆಗೆ ಹಾಜರಾದ ವೇಳೆ ಡಿಕೆ ಶಿವಕುಮಾರ್ ಅಕ್ರಮ ಹಣ ವರ್ಗಾವಣೆಯಲ್ಲಿ ಭಾಗಿದಾರರು ಎಂದು ಸಾಬೀತಾದರೆ ಡಿಕೆ ಶಿವಕುಮಾರ್ ಮತ್ತೊಮ್ಮೆ ಜೈಲು ವಾಸ ಅನುಭವಿಸುತ್ತಾರೆ.