Monday, December 23, 2024

ಕಾನೂನಿನ ಮೇಲೆ ನಮಗೆ ನಂಬಿಕೆ ಇದೆ : ಬಿ.ವೈ. ರಾಘವೇಂದ್ರ

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರ ಕುಟುಂಬದ ಮೇಲೆ ರಾಮಲಿಂಗಮ್ ಕನ್ಸ್ಟ್ರಕ್ಷನ್ ಕಂಪನಿಯಿಂದ ಲಂಚ ಪಡೆದ ಪ್ರಕರಣ ಕೇಸ್ ದಾಖಲಾಗಿದ್ದು,ಇದರ ಬಗ್ಗೆ ಸಂಸದ ಬಿ.ವೈ.ರಾಘವೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ನಮ್ಮ ಕುಟುಂಬದ ವಿರುದ್ಧ ಮೊದಲಿನಿಂದಲೂ ಷಡ್ಯಂತ್ರ ನಡೆಯುತ್ತಿದ್ದು, ಈ ಹಿಂದೆ ಸದರಿ ಪ್ರಕರಣವನ್ನು ನ್ಯಾಯಾಲಯ ವಜಾಗೊಳಿಸಿತ್ತು, ಆದರೂ ಖಾಸಗಿ ವ್ಯಕ್ತಿಯೊಬ್ಬರು ಮತ್ತೆ ತಮ್ಮ ಪ್ರಯತ್ನ ಮುಂದುವರಿಸಿದ್ದಾರೆ. ದೇಶದ ಸಂವಿಧಾನ ಮತ್ತು ಕಾನೂನಿನ ಮೇಲೆ ನಮಗೆ ನಂಬಿಕೆ ಇದ್ದು,ಈ ವಿಷಯದ ಬಗ್ಗೆ ನಮ್ಮ ಕಾನೂನು ಹೋರಾಟ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES