ಬೆಂಗಳೂರು : ವಾಡ್೯ ಪುನರ್ ವಿಂಗಡಣೆಯಲ್ಲಿ ತಾರತಮ್ಯ ನಡೆದಿದೆ ಅಂತ ಶಾಸಕರಾದ ಜಮೀರ್ ಅಹ್ಮದ್, ಸತೀಶ್ ರೆಡ್ಡಿ, ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ ಬೈರಸಂದ್ರ ನಾಗರಾಜ್ ಸೇರಿದಂತೆ ಹಲವರು ಸಲ್ಲಿಸಿದ್ದ ಆಕ್ಷೇಪಣಾ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾ.ಹೇಮಂತ್ ಚಂದನ್ ಗೌಡರ್ ಅವರಿದ್ದ ಪೀಠ, ಅರ್ಜಿದಾರರಿಗೆ ಎಲ್ಲಾ ಪಕ್ಷಗಳ ಸರ್ಕಾರಗಳೂ ತಮ್ಮ ಅನುಕೂಲದಂತೆ ಪುನರ್ವಿಂಗಡಣೆ ಮಾಡುತ್ತವೆ. ಬಿಬಿಎಂಪಿ ಚುನಾವಣೆ ಶೀಘ್ರವೇ ನಡೆಯುವ ಅಗತ್ಯವನ್ನೂ ಗಮನಿಸಬೇಕು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದೆ. ಇದರ ಜೊತೆಗೆ ಶಾಸಕ ಜಮೀರ್ ಅಹಮದ್ ಖಾನ್, ಸತೀಶ್ ರೆಡ್ಡಿ ಸೇರಿದಂತೆ ಹಲವರು ಸಲ್ಲಿಸಿದ್ದ ಅರ್ಜಿಯನ್ನು ಕೂಡ ನ್ಯಾಯಪೀಠ ವಜಾ ಮಾಡಿದೆ.
ವಾರ್ಡ್ ಮೀಸಲಾತಿ ಪ್ರಶ್ನಿಸಿದ್ದ ರಿಟ್ ಅರ್ಜಿ ವಿಚಾರಣೆ ಹಾಗೂ ಬಿಬಿಎಂಪಿ ವಾರ್ಡ್ ಮೀಸಲಾತಿ ಪ್ರಶ್ನಿಸಿದ್ದ ರಿಟ್ ಅರ್ಜಿ ವಿಚಾರಣೆಗೆ ಸಂಬಂಧಿಸಿ ಕೆಲ ಕ್ಷೇತ್ರಗಳ ಎಲ್ಲಾ ವಾರ್ಡ್‌ಗಳನ್ನೂ ಕೂಡ ಮಹಿಳೆಯರಿಗೆ ಮೀಸಲಿಡಲಾಗಿದೆ. ಹೀಗೆ ಮೀಸಲಾತಿ ನೀಡಲು ಸರ್ಕಾರದ ಮಾನದಂಡವೇನು. ? ಮೀಸಲಾತಿ ಪ್ರಶ್ನಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸೂಚನೆಯನ್ನು ನೀಡಿ ಅರ್ಜಿ ವಿಚಾರಣೆಯನ್ನು ಸೆ.21ಕ್ಕೆ ಹೈಕೋರ್ಟ್ ಮುಂದೂಡಿದೆ.
ಸದ್ಯ ಆಕ್ಷೇಪಣಾ ಅರ್ಜಿಗಳನ್ನು ರದ್ದುಪಡಿಸಿರೋದನ್ನು ನೋಡೋದಾದ್ರೆ, ಶ್ರೀಘ್ರವೇ ಬಿಬಿಎಂಪಿ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗುವ ಸಾಧ್ಯತೆಗಳು ಹೆಚ್ಚಿದ್ದು, ಇನ್ನು ಹೈಕೋರ್ಟ್ ಚುನಾವಣೆ ನಡೆಯುವ ಪ್ರಸ್ತುತ ಸನ್ನಿವೇಶವನ್ನು ಮನಗಂಡಿರುವುದರಿಂದ ಬಿಬಿಎಂಪಿ ಚುನಾವಣೆ ಶೀಘ್ರವೇ ನಡೆಯುವ ಸಾಧ್ಯತೆಗಳಿವೆ. ಸೆಪ್ಟೆಂಬರ್ 21ಕ್ಕೆ ಬಿಬಿಎಂಪಿ ವಾರ್ಡ್ ಮೀಸಲಾತಿ ಪ್ರಶ್ನಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಯುವುದರಿಂದ ಹೈಕೋರ್ಟ್ ಮೀಸಲಾತಿ ಪ್ರಶ್ನಿಸಿರುವ ಅರ್ಜಿಯನ್ನು ವಜಾ ಮಾಡಿದರೆ ಬಿಬಿಎಪಿ ಚುನಾವಣೆ ಶೀಘ್ರದಲ್ಲಿ ನಡೆಯುವ ಸಾಧ್ಯತೆಗಳಿವೆ.
ಮಲ್ಲಾಂಡಹಳ್ಳಿ ಶಶಿಧರ್ ಪವರ್ ಟಿವಿ ಬೆಂಗಳೂರು