Thursday, January 23, 2025

ನಿಂತಿದ್ದ ಬೈಕ್​​, ಕಾರಿಗೆ ಕ್ಯಾಂಟರ್​ ಡಿಕ್ಕಿ, 2 ಸಾವು

ಚಿಕ್ಕಬಳ್ಳಾಪುರ :  ರಾಮದೇವರ ಗುಡಿ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಹಾಗೂ ನಾಲ್ವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ನಿಂತಿದ್ದ ಬೈಕ್​, ಕಾರುಗಳಿಗೆ ಕ್ಯಾಂಟರ್ ಡಿಕ್ಕಿಹೊಡೆದು ರಾಮದೇವರಗುಡಿ ಪ್ರಣವ್ ಹೋಟೆಲ್​​​ಗೆ ನುಗ್ಗಿದೆ. ಹೆದ್ದಾರಿಯಿಂದ ಹೋಟೆಲ್​​​ಗೆ ಕ್ಯಾಂಟರ್ ನುಗ್ಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಹೋಟೆಲ್ ಭದ್ರತಾ ಸಿಬ್ಬಂದಿ ನಾರಾಯಣಸ್ವಾಮಿ ಹಾಗೂ ಬೈಕ್ ಸವಾರ ಜನಾರ್ಧನ ಮೃತಪಟ್ಟಿದ್ದಾರೆ. ಅಲ್ಲದೆ ಬಾಣಂತಿಗೆ ಗಂಭೀರ ಗಾಯಗಳಾಗಿದ್ದು, ಗರ್ಭಾವಸ್ಥೆಯಲ್ಲಿದ್ದ ಮಗು ಮೃತಪಟ್ಟಿದೆ.

ಇನ್ನು, ಬಾಣಂತಿಯ ಮತ್ತೊಂದು ಮಗು ಬಚಾವ್ ಆಗಿದೆ. ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಡ್ಡ ಬಂದ ಕಾರು ತಪ್ಪಿಸಲು ಹೋಗಿ ಕ್ಯಾಂಟರ್ ಹೋಟೆಲ್​​​ಗೆ ನುಗ್ಗಿದೆ. ಹೋಟೆಲ್ ಮುಂದೆ ನಿಂತಿದ್ದ ಐದು ಕಾರುಗಳು ಜಖಂ ಆಗಿವೆ. ಇನ್ನು ಸ್ಥಳಕ್ಕೆ ಚಿಕ್ಕಬಳ್ಳಾಪುರ SP D.L.ನಾಗೇಶ್​​​​​​​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕ್ಯಾಂಟರ್​ನ್ನು ವಶಕ್ಕೆ ಪಡೆದು, ಚಾಲಕ ಅಜೀತ್​ನನ್ನು ಬಂಧಿಸಲಾಗಿದೆ. ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡುತ್ತೇವೆ ಎಂದು SP ಡಿ.ಎಲ್.ನಾಗೇಶ್​​​ ತಿಳಿಸಿದ್ರು.

RELATED ARTICLES

Related Articles

TRENDING ARTICLES