Wednesday, January 22, 2025

ಕಲ್ಯಾಣ ಕರ್ನಾಟಕದಲ್ಲಿ ಕಳೆಗಟ್ಟಿದ ಸ್ವಾತಂತ್ರ್ಯ ಅಮೃತ ಮಹೋತ್ಸವ

ಕಲಬುರಗಿ : 2019ರಲ್ಲಿ ಅಂದಿನ ಸಿಎಂ ಬಿ.ಎಸ್.ಯಡಿಯೂರಪ್ಪ ಹೈದ್ರಾಬಾದ್ ಕರ್ನಾಟಕ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ಅಂತಾ ಮರುನಾಮಕರಣ ಮಾಡಿದ್ದರು. ಇದೀಗ ಈ ಭಾಗಕ್ಕೆ ಸ್ವಾತಂತ್ರ್ಯ ಸಿಕ್ಕು ಭರ್ತಿ 75 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 17ರಂದು ಕಲ್ಯಾಣಕರ್ನಾಟಕ ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ. ಅದಕ್ಕಾಗಿ ಕಲಬುರಗಿ ನಗರದಲ್ಲಿ ಎರಡು ದಿನಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ಗುರುವಾರ ನಗರದ ನಗರೇಶ್ವರ ಶಾಲೆಯಿಂದ ಕೇಂದ್ರ ಬಸ್ ನಿಲ್ದಾಣದವರೆಗೆ 24 ಕಲಾ ತಂಡಗಳು ಮತ್ತು 200 ಕಲಾವಿದರು ಈ ಭಾಗದ ಕಲೆ ಸಂಸ್ಕೃತಿ ಬಿಂಬಿಸುವ ಭವ್ಯ ಮೆರವಣಿಗೆ ನಡೆಸಿದವು‌.ಇನ್ನು ಶನಿವಾರ ಸಿಎಂ ಬಸವರಾಜ ಬೊಮ್ಮಾಯಿ‌ ಕಲಬುರಗಿಗೆ ಆಗಮಿಸಲಿದ್ದು, ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.

ಇನ್ನು ಎಲ್ಲಾ ಸರ್ಕಾರಗಳೂ ಈ ಭಾಗವನ್ನು ಕಡೆಗಣಿಸುತ್ತಲೇ ಬಂದಿವೆ ಅಂತಾ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ‌‌. ಈ ಭಾಗದಲ್ಲಿ 34,639 ನೇರ ನೇಮಕಾತಿ ಹುದ್ದೆಗಳಿದ್ದು, ಕೇವಲ 19,804 ಹುದ್ದೆಗಳು ಮಾತ್ರ ಭರ್ತಿಯಾದ್ರೆ, 7030 ಹುದ್ದೆಗಳು ಸರ್ಕಾರದ ನಿರ್ಲಕ್ಷ್ಯದಿಂದ ಭರ್ತಿಯಾಗದೇ ಉಳಿದಿದ್ದು, ಶನಿವಾರ ಸಿಎಂ ಬೊಮ್ಮಾಯಿ ಕಲಬುರಗಿಗೆ ಬಂದಾಗ ಈ ಎಲ್ಲಾ ಹುದ್ದೆಗಳ ಭರ್ತಿಗೆ ಚಾಲನೆ ನೀಡಬೇಕೆಂದು ಹೋರಾಟಗಾರರು ಆಗ್ರಹಿಸಿದ್ದಾರೆ.

ಅದೇನೇ ಇರಲಿ ಸಿಎಂ ಬಸವರಾಜ ಬೊಮ್ಮಾಯಿ ಕಲ್ಯಾಣ ಕರ್ನಾಟಕ ಸ್ವಾತಂತ್ರ್ಯಅಮೃತ ಮಹೋತ್ಸವ ಜೊತೆ ಜೊತೆಗೆ ಹಿಂದುಳಿದ ಈ ಭಾಗದ ಸಮಗ್ರ ಅಭಿವೃದ್ಧಿಗೆ ಮುಂದಾಗಲಿ.

ಅನಿಲ್‌ಸ್ವಾಮಿ ಪವರ್ ಟಿವಿ ಕಲಬುರಗಿ

RELATED ARTICLES

Related Articles

TRENDING ARTICLES