Wednesday, January 22, 2025

ಸಚಿವರಾಗಲು ನಾನು ಸಿದ್ಧವೆಂದ ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ: ಆರೋಪ ಮುಕ್ತನಾದ ಮೇಲೆ ಸಚಿವ ಸ್ಥಾನ ನೀಡುವುದಾಗಿ ಹೇಳಿದ್ದರು. ಈಗ ಸಚಿವರಾಗಲು ನಾನು ಸಿದ್ಧನಿದ್ದೇನೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಸಚಿವ ಸ್ಥಾನ ನೀಡುವ ವಿಚಾರವಾಗಿ ಮಾತನಾಡಿದ ಈಶ್ವರಪ್ಪ ಅವರು, ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್​, ಯಡಿಯೂರಪ್ಪ ಅವರು ಈ ಬಗ್ಗೆ ಮಾತು ಕೊಟ್ಟಿದ್ದರು. ಯಾಕೆ ಕೊಟ್ಟಿಲ್ಲ ಅವರನ್ನೇ ಕೇಳಬೇಕು ಎಂದರು.

ಈ ಪ್ರಕರಣದಿಂದ ಕ್ಲೀನ್​ಚಿಟ್​ ಸಿಕ್ಕಿದ ಮೇಲೂ ಯಾಕೆ ಮಂತ್ರಿ ಸ್ಥಾನ ನೀಡಿಲ್ಲ ಅವರಿಗೇ ಗೊತ್ತು. ಆದಷ್ಟು ಬೇಗ ಸಂಪುಟ ವಿಸ್ತರಣೆ ಮಾಡಲಿ. ನಾನು ಸಚಿವನಾಗಲು ಸಿದ್ಧನಿದ್ದೇನೆ. ಸಚಿವಗಿರಿ ನೀಡಿಲ್ಲ ಅಂತ ಸಂಘಟನೆಗೆ ತೊಂದರೆ ಮಾಡಲ್ಲ. ರಾಜೀನಾಮೆಗೂ ಸಂಘಟನೆಗೂ ಸಂಬಂಧವಿಲ್ಲ ಎಂದು ಅವರು ತಿಳಿಸಿದರು.

ಬೆಳಗಾವಿ ಭಾಗದ ಗುತ್ತಿಗೆದಾರ ಸಂತೋಷ್‌ ಪಾಟೀಲ್ 40% ಕಮಿಷನ್ ಕೆ.ಎಸ್ ಈಶ್ವರಪ್ಪ ಅವರು ತೆಗೆದುಕೊಂಡಿದ್ದಾರೆ ಎಂದು ಪತ್ರದ ಮೂಲಕ ಆರೋಪ ಮಾಡಿದ್ದರು. ಬಳಿಕ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಬಳಿಕ ಈಶ್ವರಪ್ಪ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

RELATED ARTICLES

Related Articles

TRENDING ARTICLES