Wednesday, January 22, 2025

ಮಾಜಿ ಪ್ರಧಾನಿ ದೇವೇಗೌಡರನ್ನ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಚಿವ ಆರ್.ಅಶೋಕ್

ಬೆಂಗಳೂರು: ಅನಾರೋಗ್ಯ ಹಿನ್ನಲೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ ಅವರನ್ನ ಇಂದು ಕಂದಾಯ ಸಚಿವ ಆರ್​. ಅಶೋಕ್​ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ಸಿಎಂ ಬೊಮ್ಮಾಯಿ, ಪ್ರಧಾನಿ ಮೋದಿ ಅವರ ಸೂಚನೆ ಮೇರೆಗೆ ದೇವೇಗೌಡ ಅವರ ಮನೆಗೆ ಹೋಗಿ ಆರ್​ ಅಶೋಕ್​ ಅವರು ಆರೋಗ್ಯ ವಿಚಾರಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ದೇವೇಗೌಡರು ಆರೋಗ್ಯದ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದರು.

ದೇವೇಗೌಡ ಮನೆಯಿಂದಲೇ ಆರ್​ ಅಶೋಕ್​ ದೂರವಾಣಿ ಮೂಲಕ ಕಲಬುರಗಿ ಪ್ರವಾಸದಲ್ಲಿದ್ದ ಸಿಎಂ ಬಸವರಾಜ ಬೊಮ್ಮಾಯಿ‌ ಅವರಿಗೆ ಕರೆ ಮಾಡಿದ್ದಾರೆ. ಈ ವೇಳೆ ಸಿಎಂ ದೇವೇಗೌಡರ ಆರೋಗ್ಯ ಕಾಪಾಡಿಕೊಳ್ಳುವಂತೆ ದೇವೇಗೌಡ ಅವರಿಗೆ ಸಲಹೆ ನೀಡಿದ್ದಾರೆ.

ಇದೆ ವೇಳೆ ದೇವೇಗೌಡರು ಪದ್ಮನಾಭನಗರದಲ್ಲಿರುವ ದೇವಗಿರಿ ಶ್ರೀನಿವಾಸ ದೇವಸ್ಥಾನದ ಅಭಿವೃದ್ಧಿ ವಿಚಾರವಾಗಿ ಕ್ರಮ ತೆಗೆದುಕೊಳ್ಳಲು ಅಶೋಕ್ ತಿಳಿಸಿದ್ದಾರೆ. ಈ ಬಾರಿ ಕ್ಯಾಬಿನೆಟ್ ನಲ್ಲಿ ಈ ಬಗ್ಗೆ ಚರ್ಚೆ ಮಾಡುವುದಾಗಿ ಅಶೋಕ್ ಹೇಳಿದ

RELATED ARTICLES

Related Articles

TRENDING ARTICLES