Wednesday, January 22, 2025

‘ಈ ವರ್ಷದಿಂದಲೇ ಭಗವದ್ಗೀತೆ ಬೋಧನೆ : ಬಿ ಸಿ ನಾಗೇಶ್

ಬೆಂಗಳೂರು : ನೈತಿಕ ಶಿಕ್ಷಣದಲ್ಲಿ ಭಗವದ್ಗೀತೆ ಬೋಧನೆಯನ್ನು ಈ ವರ್ಷದಿಂದಲೇ ಚಿಂತನೆ ಮಾಡಲಾಗಿದೆ. ಈ ಬಗ್ಗೆ ಸಮಿತಿ ರಚಿಸಲಾಗುವುದು ಎಂದು ಸದನದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್​ ಅವರು ಸದಸ್ಯ ಎಂ.ಕೆ. ಪ್ರಾಣೇಶ್​ ಅವರ ಪ್ರಶ್ನೆಗೆ ಉತ್ತರಿಸಿದರು.

ವಿಧಾನ ಪರಿಷತ್​ನಲ್ಲಿ ಈ ವಿಚಾರವನ್ನು ಸದಸ್ಯ ಎಂ. ಕೆ. ಪ್ರಾಣೇಶ್​ ಕೇಳಿದರು. ಭಗವದ್ಗೀತೆ ಬೋಧಿಸಲು ಸರ್ಕಾರಕ್ಕೆ ಮುಜುಗರವೇನಾದರೂ ಇದೆಯೇ? ಈ ಹಿಂದೆ ಭಗವದ್ಗೀತೆ ಬೋಧನೆಗೆ ಸಮಿತಿ ರಚಿಸುವ ಬಗ್ಗೆ ಹೇಳಲಾಗಿತ್ತು. ಆದರೆ ಈಗ ಬೇರೆಯೇ ಹೇಳಿಕೆ ಹೊರಬಂದಿದೆ. ಮೊದಲು ಇದ್ದ ಆಸಕ್ತಿ ಈಗ ಯಾಕೆ ಇಲ್ಲ ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ಶಿಕ್ಷಣ ಸಚಿವ ಬಿ ಸಿ ನಾಗೇಶ್, ಈ ವರ್ಷದಿಂದಲೇ ನೈತಿಕ ಶಿಕ್ಷಣ ವಿಭಾಗದಲ್ಲಿ ಭಗವದ್ಗೀತೆ ಬೋಧಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಸಮಿತಿ ರಚನೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.

RELATED ARTICLES

Related Articles

TRENDING ARTICLES