Thursday, January 23, 2025

ಶನಿವಾರದವರೆಗೆ ಚಂಡೀಗಡ ವಿವಿ ಬಂದ್

ಚಂಡೀಗಡದಲ್ಲಿ ಹಲವು ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವಿಡಿಯೊಗಳನ್ನು ವಿದ್ಯಾರ್ಥಿನಿಯೊಬ್ಬರು ಚಿತ್ರೀಕರಿಸಿದ್ದಾರೆ ಎಂಬ ಪ್ರಕರಣದಲ್ಲಿ ಪ್ರಾಥಮಿಕ ತನಿಖೆಯ ಬಳಿಕ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದು, ಆ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 3ಕ್ಕೇರಿಕೆಯಾಗಿದೆ.

ಪ್ರಕರಣದಲ್ಲಿ ಈಗಾಗಲೇ ಪೊಲೀಸರು ರಹಸ್ಯವಾಗಿ ವಿಡಿಯೋ ಚಿತ್ರೀಕರಿಸಿದ್ದ ವಿದ್ಯಾರ್ಥಿನಿಯನ್ನು ಬಂಧಿಸಿದ್ದು, ಆಕೆ ವಿಡಿಯೋ ಹಂಚಿಕೊಂಡಿದ್ದ ಆಕೆಯ ಪ್ರಿಯಕರ ಮತ್ತು ಆತನ ಸ್ನೇಹಿತನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಚಂಡೀಗಢ ವಿಶ್ವವಿದ್ಯಾನಿಲಯವನ್ನು ಮುಂದಿನ ಶನಿವಾರದವರೆಗೆ ಮುಚ್ಚಲಾಗಿದೆ.

ಪಂಜಾಬ್‌ನ ಮೊಹಾಲಿಯ ಚಂಡೀಗಡ ವಿಶ್ವವಿದ್ಯಾಲಯದ ಮಹಿಳಾ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯೊಬ್ಬರು ಇತರರ ಆಕ್ಷೇಪಾರ್ಹ ವಿಡಿಯೊಗಳನ್ನು ಚಿತ್ರಿಕರಿಸಿ ತನ್ನ ಗೆಳೆಯರಿಗೆ ಕಳುಹಿಸಿದ್ದರು ಎಂಬ ವದಂತಿ ಹರಡಿತ್ತು. ಒಬ್ಬ ವಿದ್ಯಾರ್ಥಿನಿಯು ತನ್ನ ವಿಡಿಯೊವನ್ನು ಯುವಕನೊಬ್ಬನ ಜೊತೆ ಹಂಚಿಕೊಂಡಂತೆ ಕಾಣಿಸುತ್ತಿದೆ. ಇತರ ಯಾವುದೇ ವಿದ್ಯಾರ್ಥಿನಿಯ ಆಕ್ಷೇಪಾರ್ಹವಾದ ವಿಡಿಯೊ ಸಿಕ್ಕಿಲ್ಲ ಎಂದು ಪಂಜಾಬ್‌ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕಿ ಗುರ್‌ಪ್ರೀತ್‌ ಕೌರ್‌ ಹೇಳಿದ್ದಾರೆ.

RELATED ARTICLES

Related Articles

TRENDING ARTICLES