Monday, December 23, 2024

ನಿರ್ಮಾಣ ಹಂತದ ಗೋಡೆ ಕುಸಿದು 4 ಸಾವು.!

ಉತ್ತರ ಪ್ರದೇಶ: ನಿರ್ಮಾಣ ಹಂತದ ವಸತಿ ಕಟ್ಟಡದ ಸುತ್ತುಗೋಡೆ ಕುಸಿದ ಪರಿಣಾಮವಾಗಿ ನಾಲ್ಕು ಕಾರ್ಮಿಕರು ಸಾವನ್ನೊಪ್ಪಿ, ಹಲವರು ಗಾಯಗೊಂಡ ಘಟನೆ ನೋಯ್ಡಾದ ಸೆಕ್ಟರ್ 21 ರ ಬಳಿ ನಡೆದಿದೆ.

ಇಂದು ಬೆಳಗ್ಗೆ ನಿರ್ಮಾಣ ಹಂತದ ವಸತಿ ಕಟ್ಟಡದ ಇದ್ದಕ್ಕಿದ್ದಂತೆ ಗೋಡೆ ಕುಸಿದಿದೆ. ಈ ಘಟನೆಯಲ್ಲಿ ನಾಲ್ಕು ಸಾವೀಗಿಡಾಗಿದ್ದು, 6 ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ. ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಈ ಘಟನೆ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಹೋಗಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುವಂತೆ ಸಿಎಂ ತಿಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ನಿರ್ದೇಶನ ನೀಡಿದ್ದಾರೆ ಎಂದು ಅವರ ಕಚೇರಿ ತಿಳಿಸಿದೆ.

RELATED ARTICLES

Related Articles

TRENDING ARTICLES