Wednesday, January 22, 2025

ದೇವೇಗೌಡ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಯಡಿಯೂರಪ್ಪ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ ಅವರನ್ನ ಭೇಟಿಯಾಗಿ ಬಿ.ಎಸ್ ಯಡಿಯೂರಪ್ಪ ಅವರು ಆರೋಗ್ಯ ವಿಚಾರಿಸಿದ್ದಾರೆ.

ಬೆಂಗಳೂರಿನ ಪದ್ಮಾನಾಭನಗರದಲ್ಲಿರುವ ಹೆಚ್.ಡಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಯಡಿಯೂರಪ್ಪ ಅವರು ಕೆಲವು ಸಮಯ ದೇವೇಗೌಡ ಜತೆ ಮಾತನಾಡಿ ಆರೋಗ್ಯ ವಿಚಾರಿಸಿ, ಆರೋಗ್ಯದ ಬಗ್ಗೆ ಕಾಳಜಿವಹಿಸುವಂತೆ ಬಿಎಸ್​ವೈ ಹೇಳಿದ್ದಾರೆ.

ದೇವೇಗೌಡ ಅವರು ಹಲವು ದಿನಗಳಿ ಕಾಲು ನೋವಿನಿಂದ ಬಳಲುತ್ತಿದ್ದಾರೆ. ನಿನ್ನೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೆಚ್​ಡಿಡಿ ಅವರನ್ನ ಭೇಟಿಯಾಗಿದ್ದರು. ಅಲ್ಲದೇ, ರಾಜ್ಯ ಸರ್ಕಾರ ಪರ ಸಚಿವ ಆರ್​. ಅಶೋಕ್ ದೇವೇಗೌಡ ಅವ್ರನ್ನ ಭೇಟಿಯಾಗಿ ಉಭಯ ಕುಶಲೋಪರಿ ವಿಚಾರಿಸಿದ್ದರು.

RELATED ARTICLES

Related Articles

TRENDING ARTICLES