ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯ ಜನರ ಮಲ್ಟಿಸ್ಪೆಷಾಲಿಟಿ ಆಸ್ತತ್ರೆಯಾಗಬೇಕೆಂಬ ಬಹುದಿನದ ಕೂಗಿಗೆ ಕೊನೆಗೂ ಹಸಿರು ನಿಶಾನೆ ಸಿಕ್ಕಿದೆ. ಈ ಕುರಿತಂತೆ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಜಿಲ್ಲೆಗೆ ಮಲ್ಟಿಸ್ಪೆಷಾಲಿಟಿ ಆಸ್ತತ್ರೆಯಾಗಬೇಕೆಂಬುದು ಜನರ ಬಹುದಿನದ ಬೇಡಿಕೆಯಾಗಿದ್ದು, ಜಿಲ್ಲೆಯ ಹೃದಯಭಾಗವಾದ ಕುಮಟಾದ ಆಸುಪಾಸಿನಲ್ಲಿ ಆಸ್ಪತ್ರೆ ಮಾಡಬೇಕೆಂಬ ನಮ್ಮ ಪ್ರಸ್ತಾವನೆಗೆ ಸರ್ಕಾರ ಮತ್ತು ಮಂತ್ರಿಗಳು ಒಪ್ಪಿಕೊಂಡಿದ್ದಾರೆ ಎಂದಿದ್ದಾರೆ.
ಇನ್ನು, ಇದಕ್ಕೆ ಪೂರಕವಾಗಿ ಇಂದು ಆರೋಗ್ಯ ಸಚಿವರ ಜೊತೆ ಸಭೆ ಮಾಡಿದ್ದೇವೆ. ಈಗಿರುವ ಮೆಡಿಕಲ್ ಕಾಲೇಜಿಗೆ ಎಲ್ಲಾ ಸೌಲಭ್ಯ ಕೊಟ್ಟರೆ ಆರೋಗ್ಯ ಸಮಸ್ಯೆಗಳು ಪರಿಹಾರವಾಗುತ್ತದೆ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆ ಈಡೇರಿದರೆ ನಮ್ಮ ಎಲ್ಲಾ ಬೇಡಿಕೆಗಳು ಈಡೇರುತ್ತದೆ. ಅಧಿವೇಶನದ ಮುಗಿದ ಬಳಿಕ ಸಚಿವ ಸುಧಾಕರ್ ಜಿಲ್ಲೆಗೆ ಭೇಟಿ ನೀಡಿ ಮುಂದಿನ ಬೆಳವಣಿಗೆಯ ಬಗ್ಗೆ ಚರ್ಚಿಸುತ್ತಾರೆ ಎಂದು ಹೇಳಿದರು.