Thursday, January 23, 2025

ಹಾಫ್ ಹೆಲ್ಮೆಟ್ ಧರಿಸುವ ಪೊಲೀಸರಿಗೆ ದಂಡ

ಬೆಂಗಳೂರು : ಹಾಫ್ ಹೆಲ್ಮೆಟ್ ಧರಿಸದಂತೆ ನಗರದ ಗಲ್ಲಿ-ಗಲ್ಲಿಗಳಲ್ಲಿಯೂ ಸಂಚಾರಿ ಪೊಲೀಸರು ನಿರಂತರವಾಗಿ ಜಾಗೃತಿ ಮೂಡಿಸುತ್ತಿದ್ದಾರೆ. ಸಿಗ್ನಲ್, ಜಂಕ್ಷನ್, ಇನ್ನಿತರ ಆಯಕಟ್ಟಿನ ಸ್ಥಳಗಳಲ್ಲಿ ಐಎಸ್ಐ ಮಾರ್ಕ್ ಇರುವ ಹೆಲ್ಮೆಟ್ ಧರಿಸುವಂತೆ ಬೈಕ್ ಸವಾರರಿಗೆ ತಿಳಿ ಹೇಳುತ್ತಿದ್ದಾರೆ.

ಸುರಕ್ಷತೆಗಾಗಿ ಹೆಲ್ಮೆಟ್ ಧರಿಸುವಂತೆ ಹೇಳುವ ಪೊಲೀಸರು ಅರ್ಧ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಿ ನಿಯಮ ಉಲ್ಲಂಘಿಸುತ್ತಿದ್ದಾರೆ.‌‌ ಇದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ವಿರೋಧ ಅಳಿಸಿ ಹಾಕಲು ಪೊಲೀಸ್ ಇಲಾಖೆ ಲಾ ಅಂಡ್ ಅರ್ಡರ್ ಹಾಗೂ ಸಂಚಾರ ಪೊಲೀಸರಿಗೆ ಹಾಫ್ ಹೆಲ್ಮೆಟ್ ಧರಿಸದಂತೆ ತಾಕೀತು ಮಾಡಿದೆ. ಹಿರಿಯ ಪೊಲೀಸ್ ಅಧಿಕಾರಿಗಳ ಸೂಚನೆ ಮೇರೆಗೆ ಹಾಫ್ ಹೆಲ್ಮೆಟ್ ಧರಿಸಿ ಬರುವ ಪೊಲೀಸರಿಗೆ ಹಾಗೂ ಹೆಲ್ಮೆಟ್ ಧರಿಸದ ಪೊಲೀಸರ ಬೈಕ್​​ಗಳ ಮೇಲೆ ದಂಡ ಪ್ರಯೋಗಕ್ಕೆ ಮುಂದಾಗಿದ್ದಾರೆ.

ಇನ್ನು, ಕಳೆದ ಆರು ದಿನಗಳಿಂದ ದಂಡ ವಿಧಿಸಿ ಪ್ರಕರಣ ದಾಖಲಿಸಿಕೊಳ್ಳುತ್ತಿದ್ದಾರೆ. ಜನಸಾಮಾನ್ಯರಿಗೆ ಬುದ್ಧಿ ಹೇಳುವ ಪೊಲೀಸರೇ ನಿಯಮ ಉಲ್ಲಂಘಿಸಿದರೆ ಟೀಕೆಗೆ ಗುರಿಯಾಗಬೇಕಾಗುತ್ತದೆ. ಹೀಗಾಗಿ ಐಎಸ್ಐ ಮಾರ್ಕ್ ಇರುವ ಪೂರ್ತಿ ಕವರ್ ಆಗುವ ಪೂರ್ಣ ಹೆಲ್ಮೆಟ್ ಧರಿಸಲು ಟ್ರಾಫಿಕ್ ಕಮಿಷನರ್ ಡಾ.ಬಿ.ಆರ್ ರವಿಕಾಂತೇಗೌಡ ಸೂಚನೆ ನೀಡಿದ್ದಾರೆ‌.

RELATED ARTICLES

Related Articles

TRENDING ARTICLES