ಉತ್ತರ ಕನ್ನಡ; ಉತ್ತರ ಕನ್ನಡ ಜಿಲ್ಲೆಯ ಹೃದಯಭಾಗವಾದ ಕುಮಟಾದ ಆಸುಪಾಸಿನಲ್ಲಿ ಮಲ್ಟಿಸ್ಪೆಷಾಲಿಟಿ ಮಾಡಬೇಕೆಂಬ ನಮ್ಮ ಪ್ರಸ್ತಾವನೆಗೆ ಸರ್ಕಾರ ಹಾಗೂ ಮಂತ್ರಿಗಳು ಒಪ್ಪಿಕೊಂಡಿದ್ದಾರೆ ಎಂದು ಉ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ಜಿಲ್ಲೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿಸ್ಪೆಷಾಲಿಟಿ ಆಸ್ತತ್ರೆಯಾಗಬೇಕೆಂಬುದು ಜಿಲ್ಲೆಯ ಜನರ ಬಹಳ ದಿನಗಳ ಬೇಡಿಕೆಯಾಗಿದೆ. ಇದಕ್ಕೆ ಪೂರಕವಾಗಿ ಇಂದು ಆರೋಗ್ಯ ಸಚಿವರ ಜೊತೆ ಸಭೆ ಮಾಡಿದ್ದೇವೆ
ಈಗಿರುವ ಮೆಡಿಕಲ್ ಕಾಲೇಜಿಗೆ ಎಲ್ಲಾ ಸೌಲಭ್ಯ ಒದಗಿಸಬೇಕು ಎಂದು ಹೇಳಿದ್ದೇನೆ ಎಂದರು.
ಈಗ ಇರುವಂತಹ ಮೆಡಿಕಲ್ ಕಾಲೇಜಿಗೆ ಎಲ್ಲಾ ಸೌಲಭ್ಯ ಕೊಟ್ಟರೆ ಜನರ ಆರೋಗ್ಯ ಸಮಸ್ಯೆಗಳು ಪರಿಹಾರವಾಗುತ್ತದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆ ಈಡೇರಿದರೆ ನಮ್ಮ ಎಲ್ಲಾ ಬೇಡಿಕೆಗಳು ಈಡೇರುತ್ತದೆ. ಅಧಿವೇಶನದ ಬಳಿಕ ಸಚಿವ ಸುಧಾಕರ್ ಜಿಲ್ಲೆಗೆ ಭೇಟಿ ನೀಡುತ್ತಾರೆ ಎಂದು ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ಉತ್ತರಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ತಾತ್ವಿಕ ಒಪ್ಪಿಗೆ ಹಿನ್ನಲೆಯಲ್ಲಿ ಕುಮಟಾದ ಸುತ್ತಮುತ್ತಲಿನ ನಾಲ್ಕು ಕಡೆ ಜಿಲ್ಲಾಧಿಕಾರಿಯಿಂದ ಸ್ಥಳ ಪರಿಶೀಲನೆ ನಡೆಸಲಾಯಿತು.
ಕಾರವಾರ ಶಾಸಕಿ ರೂಪಾಲಿ ನಾಯ್ಕ್ ಅವರು ಉತ್ತರ ಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಅಂತ ಸಾಕಷ್ಟು ಹೋರಾಟವನ್ನು ಮಾಡಿಕೊಂಡು ಬಂದಿದ್ದರು. ಅಲ್ಲದೇ, ಸದನದಲ್ಲೂ ಆಸ್ಪತ್ರೆ ಬೇಕು ಅಂತ ಧ್ವನಿ ಎತ್ತಿದ್ದಾರೆ. ಸಾಮಾಜಿಕ ಜಾಲತಾಣಗಲ್ಲಿ ಕೆಲವು ತಿಂಗಳ ಹಿಂದೆ ಮಲ್ಟಿಸ್ಪೆಷಾಲಿಟಿ ಬೇಕೆಂದು ಅಭಿಯಾನ ಹಮ್ಮಿಕೊಳ್ಳಲಾಗಿತ್ತು.