Monday, December 23, 2024

ದೇವೇಗೌಡ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಮಾಜಿ ಪ್ರದಾನಿ ಹೆಚ್​.ಡಿ ದೇವೇಗೌಡ ಅವರಿಗೆ ಅನಾರೋಗ್ಯ ಹಿನ್ನಲೆಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ ಅವರು ದೇವೇಗೌಡರ ಆರೋಗ್ಯವನ್ನ ವಿಚಾರಿಸಿದ್ದಾರೆ. ಸಿಎಂಗೆ ಸಚಿವ ಕೆ. ಗೋಪಾಲಯ್ಯ, ಸಚಿವ ಆರ್​ ಅಶೋಕ್, ಸಚಿವ ಮುನಿರತ್ನ, ಸಚಿವ ಬೈರತಿ ಬಸವರಾಜ್ ಸಾಥ್ ನೀಡಿದರು.

ಇತ್ತೀಚಿಗೆ ಮಾಜಿ ಸಿಎಂ ಸಿದ್ದರಾಮಯ್ಯ, ಬಿ.ಎಸ್ ಯಡಿಯೂರಪ್ಪ, ಸಚಿವ ಆರ್​ ಅಶೋಕ್ ದೇವೇಗೌಡರ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ್ದರು.

RELATED ARTICLES

Related Articles

TRENDING ARTICLES