Monday, December 23, 2024

ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದ್ರೆ ಸಿಎಂ ಬೊಮ್ಮಾಯಿ 40% ಕಮಿಷನ್​ ಓಪನ್​​.!

ಬೆಂಗಳೂರು: ರಾಜ್ಯ ಸರ್ಕಾರ 40 ಕಮೀಷನ್​ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರವಿರುವ “ಪೇ-ಸಿಎಂ” ಶೀರ್ಷಿಕೆಯ ಪೋಸ್ಟರ್‌ಗಳನ್ನು ಬೆಂಗಳೂರು ನಗರದಾದ್ಯಂತ ಅಂಟಿಸಿ ಬಿಜೆಪಿ ಸರ್ಕಾರದ ವಿರುದ್ಧ ವಿಶಿಷ್ಡ ಅಭಿಯಾನವನ್ನ ಕಾಂಗ್ರೆಸ್ ಶುರು ಮಾಡಿದೆ.

ಕ್ಯೂಆರ್ ಕೋಡ್ ಬಳಕೆದಾರರನ್ನು ದೂರುಗಳಿಗಾಗಿ ಇತ್ತೀಚೆಗೆ ಕಾಂಗ್ರೆಸ್ ಬಿಡುಗಡೆ ಮಾಡಿದ ‘40% ಕಮಿಷನ್ ಸರ್ಕಾರ’ ವೆಬ್‌ಸೈಟ್‌ಗೆ ಕರೆದೊಯ್ಯುತ್ತದೆ. ಇಂದು ಬೆಳಗ್ಗೆ ಬೆಂಗಳೂರು ನಗರದಾದ್ಯಂತ ಈ ಪೋಸ್ಟರ್​ಗಳು ರಾರಾಜಿಸುತ್ತಿವೆ.

ಪ್ರಸ್ತುತ ಬಿಜೆಪಿ ಆಡಳಿತದಲ್ಲಿ 40% ಕಮಿಷನ್ ದರವು ಹೇಗೆ ರೂಢಿಯಾಗಿದೆ ಎಂಬುದನ್ನು ಎತ್ತಿ ತೋರಿಸಲು ಪೋಸ್ಟರ್‌ಗಳನ್ನು ವಿನ್ಯಾಸಗೊಳಿಸಲಾಗಿದೆ. 40% ಕಮಿಷನ್ ಸರ್ಕಾರ ಅಂತಾ ಕಾಂಗ್ರೆಸ್​ ವೆಬ್ ಸೈಟ್ ಕ್ರಿಯೇಟ್ ಮಾಡಿದೆ.

ಈ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದ್ರೆ 40% ರಾಜ್ಯ ಸರ್ಕಾರದ ಕಮಿಷನ್ ವೆಬ್ ಸೈಟ್ ಓಪನ್ ಆಗುತ್ತದೆ. ಬಿಜೆಪಿ ಸರ್ಕಾರದ ಆಡಳಿತದಲ್ಲಿ 40% ಕಮಿಷನ್ ದಂಧೆ ಹೇಗಿದೆ ಅನ್ನೋದನ್ನು ತೋರಿಸಲು ಈ ಪೋಸ್ಟರ್‌ಗಳನ್ನು ವಿನ್ಯಾಸಗೊಳಿಸಲಾಗಿದೆ.

RELATED ARTICLES

Related Articles

TRENDING ARTICLES