Sunday, December 22, 2024

ಸಾವಿನಲ್ಲೂ 9 ಜನರಿಗೆ ಬೆಳಕಾದ ಯುವತಿ

ಹಾಸನ : ಮಗಳ ಸಾವಿನ ನೋವಿನಲ್ಲೂ ಹೆತ್ತವರು ಆಕೆಯ ಒಂಬತ್ತು ಅಂಗಾಂಗಳನ್ನು ದಾನ ಮಾಡಿ ಸಾರ್ಥಕತೆ ಮರೆದ ಪ್ರೇರಣಾದಾಯಕ ಘಟನೆಗೆ ಜಿಲ್ಲೆಯ ಕಡೂರು ತಾಲೂಕಿನ ಸೋಮನಹಳ್ಳಿ ತಾಂಡ್ಯಾದ ಶೇಖರ್ ನಾಯ್ಕ್ ಹಾಗೂ ಲಕ್ಷ್ಮಿ ದಂಪತಿ ಸಾಕ್ಷಿಯಾಗಿದ್ದಾರೆ.

ಶೇಖರ್ ನಾಯ್ಕ್, ಲಕ್ಷ್ಮಿಬಾಯಿ ದಂಪತಿಯ ಪುತ್ರಿ ರಕ್ಷಿತಾ ಚಿಕ್ಕಮಗಳೂರು ನಗರದ ಬಸವನಹಳ್ಳಿಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ವರ್ಷದ ಕಾಮರ್ಸ್ ಓದುತ್ತಿದ್ದಳು. ಎರಡು ದಿನಗಳ ಹಿಂದೆ ಮನೆಗೆ ಹೋಗಲೆಂದು ಹೋಗುವಾಗ ಸರ್ಕಾರಿ ಬಸ್‍ನಿಂದ ಆಯತಪ್ಪಿ ಬಿದಿದ್ದಳು. ಕೂಡಲೇ ಸ್ಥಳೀಯರು ಹಾಗೂ ಸಂಬಂಧಿಕರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು.

ಆದರೆ, ತಲೆಗೆ ಗಂಭೀರ ಗಾಯವಾದ ಕಾರಣ ಮೆದುಳು ಸಂಪೂರ್ಣ ನಿಷ್ಕ್ರಿಯವಾಗಿದೆ. ರಕ್ಷಿತಾಳ ಮೆದುಳು ಸಂಪೂರ್ಣ ನಿಷ್ಕ್ರಿಯವಾಗಿದ್ದು ಬೇರೆಲ್ಲಾ ಅಂಗಾಂಗಳಿಗೆ ಯಾವುದೇ ತೊಂದರೆಯಾಗದ ಹಿನ್ನೆಲೆ ಅವುಗಳ ದಾನಕ್ಕೆ ಮುಂದಾಗಬಹುದು ಎಂದು ವೈದ್ಯರು ಹೆತ್ತವರಿಗೆ ಮಾಹಿತಿ ನೀಡಿದ್ದಾರೆ. ಮಗಳನ್ನು ಕಳೆದುಕೊಂಡ ನೋವಲ್ಲೂ ಪೋಷಕರು ಅಂಗಾಂಗಗಳ ದಾನಕ್ಕೆ ಮುಂದಾಗಿ ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

RELATED ARTICLES

Related Articles

TRENDING ARTICLES