Sunday, December 22, 2024

ಕನ್ನಡ ಕಡ್ಡಾಯ ಮಸೂದೆ ಮಂಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸುವ ಉದ್ದೇಶದಿಂದ ನಡೆಯುತ್ತಿರುವ ಮಳೆಗಾಲದ ಅಧಿವೇಶನದಲ್ಲಿ ವಿಧೇಯಕವನ್ನ ರಾಜ್ಯ ಸರ್ಕಾರ ಮಂಡಿಸಿದೆ.

ರಾಜ್ಯದ ಶಾಲಾ ಕಾಲೇಜುಗಳಲ್ಲಿ ಕನ್ನಡವನ್ನು ಶಿಕ್ಷಣವನ್ನ ಒಂದು ಮಾಧ್ಯಮವಾಗಿ ಪರಿಚಯಿಸಲು, ಸರ್ಕಾರಿ ಹಾಗೂ ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಯನ್ನು ಸೃಷ್ಟಿಸುವ ಗುರಿಯನ್ನು ಇಟ್ಟುಕೊಂಡು ಈ ವಿಧೇಯಕವನ್ನ ರಾಜ್ಯ ಸರ್ಕಾರ ಮಂಡಿಸಿದೆ.

ರಾಜ್ಯದಲ್ಲಿ ಕನ್ನಡ ಕಡ್ಡಾಯ ಮಸೂದೆ ಮಂಡಿಸಿದ ಸರ್ಕಾರ

ಕನ್ನಡ ಬಳಕೆ ಉಲ್ಲಂಘಿಸಿದರೆ ರೂ 20 ಸಾವಿರ ದಂಡ

1. ಕನ್ನಡ ಭಾಷೆಯ ಬಳಕೆ ನಿಯಮ ಉಲ್ಲಂಘನೆಗೆ ರೂ 20,000ದವರೆಗೂ ದಂಡ.

2. ಉನ್ನತ ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣದಲ್ಲಿ ಕನ್ನಡ ಭಾಷೆಯ ಬಳಕೆಗೆ ಉತ್ತೇಜನ.

3. ಎಸ್‌ಎಸ್‌ಎಲ್‌ಸಿವರೆಗೆ ಕನ್ನಡವನ್ನು ಒಂದು ಭಾಷೆಯಾಗಿ ಕಲಿಯದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡ್ಡಾಯ.

4. ಎಸ್‌ಎಸ್‌ಎಲ್‌ಸಿವರೆಗೆ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದವರಿಗೆ ಉನ್ನತ ಶಿಕ್ಷಣ, ತಾಂತ್ರಿಕ ಶಿಕ್ಷಣ ಮತ್ತು ವೃತ್ತಿಪರ ಶಿಕ್ಷಣದಲ್ಲಿ ಮೀಸಲಾತಿ.

5. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಚೇರಿಗಳು, ಖಾಸಗಿ ಸಂಸ್ಥೆಗಳು ಸೇರಿದಂತೆ ಎಲ್ಲ ಕಡೆಗಳಲ್ಲಿ ಕನ್ನಡ ಭಾಷೆಯ ಪ್ರಚಾರಕ್ಕೆ ಉತ್ತೇಜನ.

6. ಇ– ಆಡಳಿತ ಮತ್ತು ಇ–ಟೆಂಡರ್‌ ಪ್ರಕ್ರಿಯೆಯಲ್ಲಿ ಕನ್ನಡದ ಬಳಕೆ.

7. ಕನ್ನಡಿಗರಿಗೆ ನಿಗದಿತ ಪ್ರಮಾಣದ ಉದ್ಯೋಗ ನೀಡುವ ಉದ್ದಿಮೆಗಳಿಗೆ ಜಮೀನು ಮಂಜೂರಾತಿ ಮತ್ತು ತೆರಿಗೆ ರಿಯಾಯಿತಿ

RELATED ARTICLES

Related Articles

TRENDING ARTICLES