Monday, December 23, 2024

ಕಾಂಗ್ರೆಸ್​​ ಅಧ್ಯಕ್ಷ ಚುನಾವಣೆಯಲ್ಲಿ ಗಾಂಧಿ ಕುಟುಂಬ ವಿರುದ್ಧ ಸ್ಪರ್ಧಿಸಲ್ಲ; ಸಿಎಂ ಅಶೋಕ್ ಗೆಹ್ಲೋಟ್

ನವದೆಹಲಿ: ಗಾಂಧಿ ಕುಟುಂಬದಿಂದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಚುನಾವಣೆಯಲ್ಲಿ ಯಾರೂ ಸ್ಪರ್ಧಿಸುವುದಿಲ್ಲ ಎಂಬುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರಾಹುಲ್ ಗಾಂಧಿ ಅವರನ್ನು ಕೇರಳದಲ್ಲಿ ಭೇಟಿಯಾದರು, ಅಲ್ಲಿ ಅವರು ನಿನ್ನೆ ಸಂಜೆ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರಾಗಲು ಎಲ್ಲರೂ ಒತ್ತಾಯ ಮಾಡುತ್ತಿದ್ದಾರೆ ಎಂದು ಹೇಳಿದೆ. ನೀವೇ ಅಧ್ಯಕ್ಷರಾಗುವಂತೆ ಹಲವಾರು ಬಾರಿ ವಿನಂತಿಸಿದೆ, ಆದರೆ ಅವರು ಒಪ್ಪಿಲ್ಲ.

ಇದೀಗ ಗಾಂಧಿ ಕುಟುಂಬದ ಯಾರೂ ಮುಂದಿನ ಕಾಂಗ್ರೆಸ್ ಅಧ್ಯಕ್ಷರಾಗಬಾರದು ಎಂದು ಅವರು ನಿರ್ಧರಿಸಿದ್ದಾರೆ ಎಂದು ಅವರು ನನಗೆ ಹೇಳಿದರು ಎಂದು ಅಶೋಕ್ ಗೆಹ್ಲೋಟ್ ಸುದ್ದಿಗಾರರ ಜತೆಗೆ ಈ ಮಾಹಿತಿಯನ್ನ ಹಂಚಿಕೊಂಡಿದ್ದಾರೆ.

RELATED ARTICLES

Related Articles

TRENDING ARTICLES