Thursday, January 23, 2025

ಕಾಂಗ್ರೆಸ್ ತಟ್ಟೆಯಲ್ಲೇ ಸಾಕಷ್ಟು ಹಗರಣಗಳಿವೆ : ಸಿಎಂ ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್​ ಮಾಡುತ್ತಿರುವ ಪೇ ಸಿಎಂ ಅಭಿಯಾನ ವಿಚಾರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ತಟ್ಟೆಯಲ್ಲೇ ಸಾಕಷ್ಟು ಸರಣಿ ಹಗರಣಗಳಿವೆ. ಅವರು ಆ ರೀತಿಯ ಪ್ರಚಾರಗಳನ್ನು ಮಾಡಿಕೊಂಡು ಹೋಗಲಿ. ಡರ್ಟಿ ಪಾಲಿಟಿಕ್ಸ್ ಮಾಡಿಕೊಂಡು ಹೊರಟರೆ ಕಾಂಗ್ರೆಸ್ ಅಧಃಪತನವಾಗುವುದರಲ್ಲಿ ಅನುಮಾನವೇ ಇಲ್ಲ. ರಾಜ್ಯದ ಮರ್ಯಾದೆಯನ್ನು ಕಾಂಗ್ರೆಸ್ ಹಾಳು ಮಾಡುತ್ತಿದೆ.

ಇವತ್ತಿನ ಯುವ ಸಮೂಹಕ್ಕೆ ಏನೇನಿದೆ ಎಂಬುದು ಸಾಮಾಜಿಕ ಜಾಲತಾಣದ ಮೂಲಕ ತಿಳಿಯುತ್ತಿದೆ. ಚುನಾವಣಾ ವರ್ಷವಾಗಿರುವುದರಿಂದ ಇದೆಲ್ಲವೂ ಸರ್ವೇ ಸಾಮಾನ್ಯ. ವೈಯಕ್ತಿಕ ಟೀಕೆಗಳಿಗೆ ಹೆದರುವುದಿಲ್ಲ ಎಂದರು. ಇನ್ನು ಸಿಎಂ ಬಸವರಾಜ ಬೊಮ್ಮಾಯಿ ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯ ಕೋರಿ ದಸರಾ ಹಬ್ಬದ ಸಂದರ್ಭದಲ್ಲಿ ರಾಜ್ಯದ ಜನತೆಗೆ ಒಳಿತಾಗಲಿ ಎಂದರು.

RELATED ARTICLES

Related Articles

TRENDING ARTICLES