Monday, December 23, 2024

ಮಾಜಿ ಸಿಎಂ ಎಸ್.ಎಂ ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು; ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರು ತೀವ್ರ ಜ್ವರದಿಂದ ಬಳಲುತ್ತಿರುವ ಹಿನ್ನಲೆಯಲ್ಲಿ ನಿನ್ನೆ ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ಮುಖಂಡರಾಗಿದ್ದ ಎಸ್​. ಕೃಷ್ಣ ಅವರು, ನಿನ್ನೆ ತಡರಾತ್ರಿ ತೀವ್ರ ಜ್ವರ, ವಿಪರೀತ ತಲೆನೋವು ಕಾಣಿಸಿಕೊಂಡಿದೆ. ಬೆಂಗಳೂರಿನ ಹೆಚ್‌ಎಎಲ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ತಡರಾತ್ರಿ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಎಸ್​ಎಂ ಕೃಷ್ಣ ಅವರಿಗೆ ನಿಗಾವಹಿಸಬೇಕೆಂದು ಸೂಚಿಸಿದ್ದಾರೆ. ಇನ್ನು ಎಸ್‌.ಎಂ.ಕೃಷ್ಣ ಅವರು ಚಿಕಿತ್ಸೆ ಸ್ಪಂದಿಸುತ್ತಿದ್ದು, ಯಾವುದೇ ಆತಂಕವಿಲ್ಲ ಎಂದು ವೈದ್ಯರು ದೃಢಪಡಿಸಿದ್ದಾರೆ.

ಎಸ್.ಎಂ.ಕೃಷ್ಣ ಜ್ವರ, ತಲೆನೋವು ಕಡಿಮೆಯಾದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES