Monday, December 23, 2024

ಜಾಕ್ವೆಲಿನ್​​ಗೆ ಮಧ್ಯಂತರ ಜಾಮೀನು

ನವದೆಹಲಿ : ಖ್ಯಾತ ನಟಿ ಜಾಕ್ವೆಲಿನ್​ ಫರ್ನಾಂಡಿಸ್ ಅವರು ವಂಚನೆ ಕೇಸ್​ನಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಬಂಧನ ಭೀತಿಯಲ್ಲಿ ಇರುವ ಅವರು ಸದ್ಯಕ್ಕೆ ನ್ಯಾಯಾಲಯದಿಂದ ಮಧ್ಯಂತರ ಜಾಮೀನು ಪಡೆದಿದ್ದಾರೆ.

ಉದ್ಯಮಿಗಳಿಗೆ ಬರೋಬ್ಬರಿ 200 ಕೋಟಿ ರೂಪಾಯಿ ವಂಚನೆ ಮಾಡಿದ ಆರೋಪವನ್ನು ಸುಕೇಶ್​ ಚಂದ್ರಶೇಖರ್​ ಎದುರಿಸುತ್ತಿದ್ದಾರೆ. ಅವರ ಜೊತೆ ಸಂಪರ್ಕ ಹೊಂದಿದ್ದ ಕಾರಣದಿಂದ ಜಾಕ್ವೆಲಿನ್​ ಫರ್ನಾಂಡಿಸ್​ ಅವರಿಗೆ ಸಂಕಷ್ಟ ಎದುರಾಗಿದೆ. ಈಗಾಗಲೇ ಅನೇಕ ಬಾರಿ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ನ್ಯಾಯಾಲಯದ ಮೊರೆ ಹೋಗಿದ್ದು, ಮಧ್ಯಂತರ ಜಾಮೀನು ಪಡೆದುಕೊಂಡಿದ್ದಾರೆ.

RELATED ARTICLES

Related Articles

TRENDING ARTICLES