Friday, May 10, 2024

ನವರಾತ್ರಿಗೆ ಬಂಪರ್ ಆಫರ್ ಘೋಷಿಸಿದ KSRTC

ಬೆಂಗಳೂರು : ಕರ್ನಾಟಕ ಸೇರಿ ದೇಶದಾದ್ಯಂತ ಇಂದಿನಿಂದ ಸಡಗರ-ಸಂಭ್ರಮದ ನವರಾತ್ರಿ ಉತ್ಸವ ಪ್ರಾರಂಭವಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ನಾಡಹಬ್ಬ ಮೈಸೂರು ದಸರಾವನ್ನು ಉದ್ಘಾಟಿಸಿದರು. ದಸರಾ ಹಬ್ಬದ ಪ್ರಯುಕ್ತ ಪ್ರವಾಸಿಗರು ಮತ್ತು ಭಕ್ತರ ಅನುಕೂಲಕ್ಕಾಗಿ ಕೆಎಸ್ಆರ್​ಟಿಸಿ ಇದೇ ಮೊದಲ ಬಾರಿಗೆ ಅತ್ಯುತ್ತಮ ಟೂರ್ ಪ್ಯಾಕೇಜ್ ಪರಿಚಯಿಸಿದೆ.

ಇನ್ನು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಮಂಗಳೂರು ವಿಭಾಗವು ಮಂಗಳೂರು ದಸರಾ ದರ್ಶನಕ್ಕಾಗಿ ಪ್ಯಾಕೇಜ್ ಟೂರ್ ಆಯೋಜಿಸಿದೆ. ಸೆಪ್ಟೆಂಬರ್ 26ರಿಂದ ಅಕ್ಟೋಬರ್ 5ರವರೆಗೆ ನವರಾತ್ರಿ ಹಬ್ಬದ ಎಲ್ಲಾ ದಿನಗಳಲ್ಲಿ 1 ದಿನದ ಪ್ರವಾಸ ಪ್ಯಾಕೇಜ್ ಇದಾಗಿದೆ. ಈ ಟೂರ್ ಪ್ಯಾಕೇಜ್‍ನಲ್ಲಿ ಪ್ರವಾಸಿಗರು ದಕ್ಷಿಣ ಕನ್ನಡ ಜಿಲ್ಲೆಯ 9 ಪ್ರಮುಖ ದೇವಾಲಯಗಳ ದರ್ಶನ ಮಾಡಬಹುದಾಗಿದೆ. ಪ್ರವಾಸಿಗರು ಮತ್ತು ಯಾತ್ರಾರ್ಥಿಗಳು ಟಿಕೆಟ್ ಕಾಯ್ದಿರಿಸಿ ನವರಾತ್ರಿಯ ಸಮಯದಲ್ಲಿ ಕರಾವಳಿ ಜಿಲ್ಲೆಯ ಪ್ರಮುಖ ದೇವಾಲಯಗಳಿಗೆ ಭೇಟಿ ನೀಡಬಹುದು. ಈ ಬಗ್ಗೆ KSRTC ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಈ ಪ್ರವಾಸ ಪ್ಯಾಕೇಜ್‍ನ ಭಾಗವಾಗಿ ಮಂಗಳಾದೇವಿ ದೇವಸ್ಥಾನ, ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಗುರುಪುರದ ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನ ಮತ್ತು ಕಡಲತೀರಗಳ ದರ್ಶನ ಮಾಡಬಹುದಾಗಿದೆ.

RELATED ARTICLES

Related Articles

TRENDING ARTICLES