Monday, December 23, 2024

ಮುರುಘಾ ಶ್ರೀಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ

ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪದಡಿ ಪೋಕ್ಸೋ ಪ್ರಕರಣದ ಅಡಿಯಲ್ಲಿ ಬಂಧಿತರಾಗಿರುವ ಚಿತ್ರದುರ್ಗದ ಬೃಹನ್ಮಠದ ಮುರುಘಾ ಶ್ರೀ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಿ ನ್ಯಾಯಾಲಯವು ಆದೇಶಿಸಿದೆ.

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಆರೋಪದ ಅಡಿ ಶ್ರೀಗಳನ್ನ ಬಂಧಿಸಲಾಗಿತ್ತು. ಇಂದು ಅವರ ನ್ಯಾಯಾಂಗ ಬಂಧನ ಮುಗಿದ ಹಿನ್ನಲೆಯಲ್ಲಿ ಇಂದು ನ್ಯಾಯಾಲಯದ ಮುಂದೆ ಶ್ರೀಗಳನ್ನ ಹಾಜರುಪಡಿಸಲಾಗಿತ್ತು. ಈಗ ನ್ಯಾಯಾಲಯವು ಶ್ರೀಗಳ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಿದೆ.

ಆರೋಪಿಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಇದರೊಂದಿಗೆ ಚಿತ್ರದುರ್ಗದ ಬೃಹನ್ಮಠದ ಮುರುಘಾ ಶ್ರೀ ಜೈಲುವಾಸ ಮುಂದುವರಿದಿದೆ. ಅದರಂತೆ ಲೈಂಗಿಕ ದೌರ್ಜನ್ಯದಲ್ಲಿ ಭಾಗಿಯಾದ ಎ2 ಆರೋಪಿ ವಾರ್ಡನ್​ ರಶ್ಮಿಗೂ ಬಂಧನ ಅವಧಿ ದಿನ ವಿಸ್ತರಣೆ ಆಗಿದೆ.

RELATED ARTICLES

Related Articles

TRENDING ARTICLES