Thursday, December 26, 2024

ಮುಂಜಾಗ್ರತಾ ಕ್ರಮವಾಗಿ SDPI-PFI ಮೇಲೆ ಪೊಲೀಸರ ದಾಳಿ; ಸಿಎಂ ಬೊಮ್ಮಾಯಿ

ಬೆಂಗಳೂರು: ಪಿಎಫ್​ಐ ಕಾರ್ಯಕರ್ತರ ಬಂಧನ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.

ಎನ್​ಐಎ ಕೇವಲ ಕರ್ನಾಟಕದಲ್ಲಿ ಮಾತ್ರ ಅಲ್ಲದೆ ದೇಶದ ಹಲವು ಭಾಗಗಳಲ್ಲಿ ದಾಳಿ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ರಾಜ್ಯ ಪೊಲೀಸರು ದಾಳಿ ಮಾಡಿ ಕೆಲವರನ್ನ ವಶಕ್ಕೆ ಪಡೆದಿದ್ದಾರೆ ಎಂದು ಸಿಎಂ ಹೇಳಿದರು.

ಎಸ್​ಡಿಪಿಐ ಹಾಗೂ ಪಿಎಫ್​ಐ ಸಂಘಟನೆ ಅವರ ಯೋಜನೆಗಳೇನು, ಯಾಕೆ ಪ್ರತಿಭಟನೆಗಳ ಮಾಡ್ತಾರೆ ಅನ್ನೋ ಬಗ್ಗೆ ಸದ್ಯ ಮಾಹಿತಿ ಇಲ್ಲ. ಮುಂಜಾಗ್ರತಾ ಕ್ರಮವಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಳಿ ಆಗಿದೆ. ಎಷ್ಟು ಜನರ ಬಂಧನ ಆಗಿದೆ‌ ಇದರ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಮಾತನಾಡುತ್ತೇನೆ.

ಸಂಘಟನೆಗಳ ಕಾರ್ಯಕರ್ತರ ಬಗ್ಗೆ ಹಲವು ಮಾಹಿತಿ ಮೇಲೆ‌ ಕಲೆ ಹಾಕಿದ ಮೇಲೆ ಪೊಲೀಸರು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ. ಪೊಲೀಸರು ಈಗಾಗಲೇ ಈ ಸಂಘಟನೆಗಳ ಬಗ್ಗೆ ಹಲವು ಮಾಹಿತಿ ಕಲೆಹಾಕಿ ಕಾರ್ಯಾಚರಣೆ ಮಾಡಿದ್ದಾರೆ. ಕೇವಲ ಕರ್ನಾಟಕ ಮಾತ್ರವಲ್ಲ ಅನೇಕ ರಾಜ್ಯದಲ್ಲೂ ಕಾರ್ಯಾಚರಣೆ ಆಗಿದೆ. ಎಷ್ಟು ಜನರ ಬಂಧನ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾಹಿತಿ ತರಿಸಿಕೊಂಡು ಮಾತಾನಾಡ್ತೀನಿ ಎಂದು ಸಿಎಂ ಬೊಮ್ಮಾಯಿ ಹೇಳಿದರು.

RELATED ARTICLES

Related Articles

TRENDING ARTICLES