ಶಿವಮೊಗ್ಗ: ಕೇಂದ್ರ ಸರ್ಕಾರ PFI ಸಂಘಟನೆಯನ್ನ 5 ವರ್ಷಗಳ ಕಾಲ ನಿಷೇಧಿಸಿರುವುದು ಸ್ವಾಗತಾರ್ಹ ಕ್ರಮ. ದೇಶದಲ್ಲಿ ಕೋಮು ಸೌಹಾರ್ದತೆ ಹಾಳು ಮಾಡಿ ಭಯೋತ್ಪಾದಕ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದ PFI ಹಾಗೂ ಅದರ ಇತರೆ ಸಹ ಸಂಸ್ಥೆಗಳ ವಿರುದ್ಧ ಕೇಂದ್ರ ಸೂಕ್ತ ಕ್ರಮ ತೆಗೆದುಕೊಂಡಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಈ ಕುರಿತು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಪ್ರತಿಕ್ರಿಯಿಸಿದ ಅವರು, 5 ವರ್ಷ PFI ಸಂಘಟನೆಯನ್ನು ನಿಷೇಧಿಸಿರುವುದು ಮಹತ್ವದ ಬೆಳವಣಿಗೆ. ಬಲವಾದ ಸಾಕ್ಷ್ಯಾಧಾರಗಳ ಮೇಲೆ PFIಯನ್ನು ಬ್ಯಾನ್ ಮಾಡಲಾಗಿದೆ ಎಂದರು.
ಇನ್ನು, PFI ಹಾಗೂ ಅದರ ಇತರೆ ಸಹವರ್ತಿ ಸಂಸ್ಥೆಗಳನ್ನು ಐದು ವರ್ಷಗಳವರೆಗೆ UAPA ಕಾಯ್ದೆ ಅಡಿ ನಿಷೇಧಿಸಿದೆ. ಸರ್ಕಾರ ಬಲವಾದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ದೇಶದ ಏಕತೆ ಹಾಗೂ ಸಮಗ್ರತೆ ಕಾಪಾಡುವ ನಿಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಂಡಿದೆ ಎಂದು ತಿಳಿಸಿದರು.