Thursday, January 16, 2025

ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಜಯ

ಕೇರಳ; ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಭಾರತ 8 ವಿಕೆಟ್​ಗಳಿಂದ ಭರ್ಜರಿ ಜಯ ಸಾಧಿಸಿದೆ.

ತಿರುವನಂತಪುರಂದ ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣ ನಡೆದ ಮೊದಲ ಟಿ-20 ಪಂದ್ಯದಲ್ಲಿ ಟಾಸ್​ ಗೆದ್ದು ಮೊದಲು ಭಾರತ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ ನಷ್ಟಕ್ಕೆ 106 ರನ್​ ಕಲೆಹಾಕಿತು. ಭಾರತ ಪರ ಅರ್ಷದೀಪ್ ಸಿಂಗ್ 3, ದೀಪಕ್​ ಚಹಾರ್ 2, ಹರ್ಷಲ್ ಪಟೇಲ್ 2, ಅಕ್ಷರ್​ ಪಟೇಲ್​ 1 ವಿಕೆಟ್ ಪಡೆದರು.

107 ರನ್​ ಗುರಿ ಬೆನ್ನತ್ತಿದ ಭಾರತ ತಂಡ 16.4 ಓವರ್​ಗಳಲ್ಲಿ 2 ವಿಕೆಟ್​ ಕಳೆದುಕೊಂಡು 110 ರನ್​ ಕಲೆಹಾಕುವ ಮೂಲಕ ಭಾರತ 8 ವಿಕೆಟ್​ಗಳ ಭರ್ಜರಿ ಜಯ ತನ್ನದಾಗಿಸಿಕೊಂಡಿತು. ಭಾರತದ ಪರ ಕೆ.ಎಲ್ ರಾಹುಲ್ 51, ಸೂರ್ಯಕುಮಾರ್​ ಯಾದವ್​ 50 ರನ್​ ಹೊಡೆದು ಮಿಂಚಿದರು.

RELATED ARTICLES

Related Articles

TRENDING ARTICLES