Monday, December 23, 2024

ನೂತನ CDS ಆಗಿ ಅನಿಲ್​​ ಚೌಹಾಣ್​​​ ನೇಮಕ

ಜನರಲ್​ ಬಿಪಿನ್​ ರಾವತ್​ ಅವರ ಅಕಾಲಿಕ ಸಾವಿನಿಂದಾಗಿ ತೆರವಾಗಿದ್ದ ಮೂರು ಸೇನಾಪಡೆಗಳ ಮುಖ್ಯಸ್ಥ ಸ್ಥಾನಕ್ಕೆ ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ.

ಅನಿಲ್​ ಚೌಹಾಣ್​​ ಅವರು ಕಳೆದ ವರ್ಷ ಪೂರ್ವ ಸೇನಾ ಕಮಾಂಡರ್ ಆಗಿ ನಿವೃತ್ತರಾಗಿದ್ದರು. ರಾಷ್ಟ್ರೀಯ ಭದ್ರತಾ ಮಂಡಳಿಯ ಮಿಲಿಟರಿ ಸಲಹೆಗಾರರಾಗಿಯೂ ಸೇವೆ ಸಲ್ಲಿಸಿದ್ದರು. ಸುಮಾರು 40 ವರ್ಷಗಳ ವೃತ್ತಿಜೀವನದಲ್ಲಿ ಲೆಫ್ಟಿನೆಂಟ್ ಜನರಲ್ ಚೌಹಾಣ್ ಅವರು ಹಲವಾರು ಕಮಾಂಡ್, ಸಿಬ್ಬಂದಿ ಮತ್ತು ಇನ್​ಸ್ಟ್ರುಮೆಂಟಲ್​ ನೇಮಕಾತಿಗಳನ್ನು ಹೊಂದಿದ್ದಾರೆ.

ಜಮ್ಮು ಮತ್ತು ಕಾಶ್ಮೀರ, ಈಶಾನ್ಯ ಭಾರತದ ಬಂಡಾಯ ದಮನ ಕಾರ್ಯಾಚರಣೆಗಳಲ್ಲಿ ವ್ಯಾಪಕ ಅನುಭವವನ್ನು ಹೊಂದಿದ್ದಾರೆ. ಮೇ 18,1961 ರಂದು ಜನಿಸಿದ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ ಅವರು 1981ರಲ್ಲಿ ಭಾರತೀಯ ಸೇನೆಯ 11 ಗೂರ್ಖಾ ರೈಫಲ್ಸ್‌ಗೆ ನಿಯೋಜಿಸಲ್ಪಟ್ಟರು. ಖಡಕ್​ ವಾಸ್ಲಾದ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ಡೆಹ್ರಾಡೂನ್‌ನ ಇಂಡಿಯನ್ ಮಿಲಿಟರಿ ಅಕಾಡೆಮಿಯ ಹಳೆಯ ವಿದ್ಯಾರ್ಥಿಯಾಗಿದ್ದಾರೆ. ಹಲವಾರು ಸೇನಾ ವಿಭಾಗಗಳಲ್ಲಿ ಸೇವೆ ಸಲ್ಲಿಸಿರುವ ಅನಿಲ್​ ಚೌಹಾಣ್​ ಅವರು 2021ರ ಮೇ 31 ರಂದು ಭಾರತೀಯ ಸೇನೆಯಿಂದ ನಿವೃತ್ತರಾಗಿದ್ದರು.

RELATED ARTICLES

Related Articles

TRENDING ARTICLES