Monday, December 23, 2024

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಅಧ್ಯಕ್ಷ ಚುನಾವಣೆ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಇಂದು (ಶುಕ್ರವಾರ) ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸಿದ ನಂತರ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಕಾಂಗ್ರೆಸ್​ ಪಕ್ಷವು ಪಕ್ಷದಲ್ಲಿ ದೊಡ್ಡ ಬದಲಾವಣೆಗಾಗಿ ಮಾಡಲು ಬಯಸುತ್ತಿದೆ. ಪಕ್ಷದ ನಾಯಕರು ತಮಗೆ ಮತ ನೀಡುವಂತೆ ಮನವಿ ಮಾಡಿದರು. ಅ.17 ರಂದು ನಡೆಯುವ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ನಾಮಪತ್ರ ಸಲ್ಲಿಸಲು ಬೆಂಬಲಿಸಿದ್ದಕ್ಕಾಗಿ ಎಲ್ಲಾ ರಾಜ್ಯಗಳ ಹಿರಿಯ ನಾಯಕರಿಗೆ ಖರ್ಗೆ ಅಭಿನಂದನೆಗಳು ತಿಳಿಸಿದರು.

ಏತನ್ಮಧ್ಯೆ, ಮೊದಲು ಕಣಕ್ಕೆ ಇಳಿಯುತ್ತಾರೆ ಎಂದು ಊಹಿಸಲಾಗಿದ್ದ ದಿಗ್ವಿಜಯ ಸಿಂಗ್ ಸ್ಪರ್ಧೆಯಿಂದ ಹಿಂದೆ ಸರಿದರು. ಕಾಂಗ್ರೆಸ್ ನಾಯಕ ಶಶಿ ತರೂರ್ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ರೇಸ್‌ನಿಂದ ಹೊರಗುಳಿದಿದ್ದಾರೆ. ರಾಜ್ಯದಲ್ಲಿ ಖರ್ಗೆ ಅವರು ಎಐಸಿಸಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಖ ಖಚಿತ ಎನ್ನಲಾಗುತ್ತಿದೆ.

RELATED ARTICLES

Related Articles

TRENDING ARTICLES