ನವದೆಹಲಿ: ರಾಜ್ಯ ಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ವರದಿಗಳು ತಿಳಿಸಿವೆ.
ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರ ಬೆಂಬಲಿತ ಅಭ್ಯರ್ಥಿಯಾಗಿ ಕಾಂಗ್ರೆಸ್ ಅಧ್ಯಕ್ಷರ ಸ್ಪರ್ಧೆಗೆ ಇತ್ತೀಚೆಗಷ್ಟೇ ಸೇರ್ಪಡೆಯಾಗಿದ್ದು, ಒಂದು ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದರೆ ಒಬ್ಬ ವ್ಯಕ್ತಿ ಒಂದು ಹುದ್ದೆಗಿಂತ ಇನ್ನೊಂದು ಹುದ್ದೆ ವಹಿಸುವಂತಿಲ್ಲ ಎಂಬ ನಿಯಮದ ಪ್ರಕಾರ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.
ಅಕ್ಟೋಬರ್ 17 ರಂದು ನಡೆಯಲಿರುವ ಚುನಾವಣೆಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಖರ್ಗೆ ಅವರು ಇಂದು ದಿಗ್ವಿಜಯ ಸಿಂಗ್ ಮತ್ತು ಶಶಿ ತರೂರ್ ನಂತರ ಮೂರನೇ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಶಶಿ ತರೂರ್ ಮತ್ತು ದಿಗ್ವಿಜಯ ಸಿಂಗ್ ಕೂಡ ಅರ್ಜಿಗಳ ಕೊನೆಯ ದಿನವಾದ ಇಂದು ತಮ್ಮ ನಾಮಪತ್ರವನ್ನು ಸಲ್ಲಿಸುವ ನಿರೀಕ್ಷೆಯಿದೆ. ಸ್ಪರ್ಧೆಗೆ ಅರ್ಜಿ ಸಲ್ಲಿಸಲು ಮಧ್ಯಾಹ್ನ 3 ಗಂಟೆಗೆ ಕೊನೆಯ ಸಮಯವಾಗಿದೆ.