Wednesday, January 22, 2025

AICC ಅಧ್ಯಕ್ಷ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಶಶಿ ತರೂರ್​​

ನವದೆಹಲಿ: ಅಕ್ಟೋಬರ್ 17 ರಂದು ನಡೆಯಲಿರುವ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ಕಾಂಗ್ರೆಸ್​ ನಾಯಕ ಶಶಿ ತರೂರ್​ ನಾಮಪತ್ರವನ್ನ ಇಂದು ಅಧಿಕೃತವಾಗಿ ಸಲ್ಲಿಸಿದ್ದಾರೆ.

ಇಂದು(ಸೆ.30) ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕೊನೆಯದಿನವಾಗಿದ್ದರಿಂದ ದೆಹಲಿಯ ಎಐಸಿಸಿ ಕಚೇರಿಗೆ ತಮ್ಮ ಕಾರ್ಯಕರ್ತರೊಂದಿಗೆ ಇಂದು ಭೇಟಿ ನೀಡಿ ಸಂಸದ ಶಶಿ ತರೂರ್​ ನಾಮ ಪತ್ರ ಸಲ್ಲಿಸಿದರು.

ಅಕ್ಟೋಬರ್​ 6 ರೊಳಗೆ ನಾಮಪತ್ರ ಹಿಂಪಡೆಯುವ ಕೊನೆಯದಿನವಾಗಿದೆ. ಅ. 17ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 4ರ ವರೆಗೆ ಮತದಾನ ನಡೆಯಲಿದೆ. ಅ. 19ರಂದು ಎಐಸಿಸಿ ಕೇಂದ್ರ ಕಚೇರಿಯಲ್ಲಿ ಚುನಾವಣಾ ಫಲಿತಾಂಶ ಘೋಷಣೆಯಾಗಲಿದೆ.

ಇನ್ನು ಶಶಿ ತರೂರ್​ ಪ್ರತಿಸ್ಪರ್ಧಿಯಾಗಿ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಆದರೆ ಈವರೆಗೂ ಖರ್ಗೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿಲ್ಲ. ಆದರೆ ಇಂದು ಮಧ್ಯಾಹ್ನ ಅರ್ಜಿ ಸಲ್ಲಿಸಲಿದ್ದಾರೆ ಎಂದು ಅವರ ಮೂಲಗಳು ತಿಳಿಸುತ್ತಿವೆ.

ಈ ಹಿಂದೆ ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆಗೆ ದಿಗ್ವಿಜಯ ಸಿಂಗ್ ಮತ್ತು ಅಶೋಕ್ ಗೆಹ್ಲೋಟ್ ಸ್ಪರ್ಧೆ ಮಾಡಲು ಕಸರತ್ತು ನಡೆಸಿದ್ದರು. ಆದರೆ ಬದಲಾದ ಬೆಳವಣಿಗೆಯಲ್ಲಿ ಸ್ಪರ್ಧೆಯಿಂದ ಈ ಇಬ್ಬರು ನಾಯಕರು ಹಿಂದೆ ಸರಿದಿದ್ದಾರೆ. ಈಗ ಮಲ್ಲಿಕಾರ್ಜುನ್​ ಖರ್ಗೆ ಸ್ಪರ್ಧೆ ಮಾಡುವುದ ಬಹುತೇಕ ಖಚಿತವಾಗಿದೆ.

RELATED ARTICLES

Related Articles

TRENDING ARTICLES