Wednesday, January 22, 2025

HDD ಆರೋಗ್ಯ ವಿಚಾರಿಸಿದ ನಿರ್ಮಲ ಸೀತಾರಾಮನ್​​​

ಬೆಂಗಳೂರು : ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಸೌಹಾರ್ದ ಭೇಟಿ ನೀಡಿದರು.

ಕೇಂದ್ರ ಸಚಿವರನ್ನು ಮಾಜಿ ಪ್ರಧಾನಿಗಳ ಕುಟುಂಬ ಸದಸ್ಯರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು. ಮಾಜಿ ಪ್ರಧಾನಿಗಳ ಆರೋಗ್ಯ ವಿಚಾರಿಸಿದ ನಿರ್ಮಲಾ ಸೀತಾರಾಮನ್ ಅವರು, ಕೆಲ ಹೊತ್ತು ಕುಶಲೋಪರಿ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಉಪಸ್ಥಿತರಿದ್ದರು.

ನನ್ನ ಆರೋಗ್ಯ ಉತ್ತಮವಾಗಿದ್ದು,ಸ್ವಲ್ಪ ಪ್ರಮಾಣದಲ್ಲಿ ಅನಾರೋಗ್ಯ ಉಂಟಾದ ಕಾರಣಕ್ಕೆ ವೈದ್ಯರು ವಿಶ್ರಾಂತಿಗೆ ಸಲಹೆ ಮಾಡಿದ್ದರು. ಆದ ಕಾರಣ ಕೆಲ ಕಾಲ ಮನೆಯಲ್ಲೇ ವಿಶ್ರಾಂತಿ ಪಡೆಯಬೇಕಾಯಿತು. ಇನ್ನು ಕೆಲ ದಿನ ಮನೆಯಲ್ಲೇ ಇದ್ದು ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ಮಾಡಿದ್ದಾರೆ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇನೆ ಎಂದು ದೇವೇಗೌಡ ಅವರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದರು.

ದೇವೇಗೌಡ ಅವರನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಂಪುಟ ಸಹುದ್ಯೋಗಿಗಳೊಂದಿಗೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೂಡಾ ಇತರ ಕಾಂಗ್ರೆಸ್ ನಾಯಕರೊಂದಿಗೆ ಭೇಟಿ ಮಾಡಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.

RELATED ARTICLES

Related Articles

TRENDING ARTICLES