Monday, December 23, 2024

ನಟ ರಿಷಬ್ ಶೆಟ್ಟಿ ಪ್ರತಿಸ್ಪರ್ಧಿ ಡಿಕೆ ಶಿವಕುಮಾರ್​; ಡಿಕೆಶಿ ಕಣ್ಣೀರಿಗೆ ಸಿಟಿ ರವಿ ವ್ಯಂಗ್ಯ

ಚಿಕ್ಕಮಗಳೂರು: ಆಕ್ಸಿಜನ್​ ದುರಂತದಲ್ಲಿ ಸಾವಿಗೀಡಾದ ಕುಟುಂಬಕ್ಕೆ ಇತ್ತೀಚಿಗೆ ಡಿ.ಕೆ ಶಿವಕುಮಾರ್​ ಅವರು ಕಾಂಗ್ರೆಸ್​ ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಕಣ್ಣೀರು ಹಾಕಿದ್ದರು. ಇದಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ಪ್ರತಿಕ್ರಿಯಿಸಿದ್ದಾರೆ.

ಇಂದು ಡಿಕೆಶಿ ಕಣ್ಣೀರ ಬಗ್ಗೆ ಮಾತನಾಡಿದ ಅವರು, ಡಿಕೆಶಿ ಒಳಗಡೆ ಇಂತಹ ಕಲಾವಿದ ಇದ್ದನೆಂದು ನಾನು ಅಂದುಕೊಂಡಿರಲಿಲ್ಲ.  ಡಿ.ಕೆ.ಶಿವಕುಮಾರ್ ಅವರು ತುಂಬಾ ಚೆನ್ನಾಗಿ ನಟನೆ ಮಾಡ್ತಾರೆ. ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದಾಗಿತ್ತು ಎಂದು ಸಿಟಿ ರವಿ ಅವರು ವ್ಯಂಗ್ಯವಾಡಿದರು.

ಇನ್ನು ಬಣ್ಣ ಹಾಕದೇ, ಗ್ಲಿಸರಿನ್ ಹಾಕದೇ ಡಿಕೆಶಿಗೆ ಕಣ್ಣೀರು ಹಾಕುವ ನಟನೆ ಅವರಿಗೆ ಒಲಿದು ಬಂದಿದೆ. ಆಕಸ್ಮಿಕವಾಗಿ ಡಿಕೆಶಿ ಅವರು ರಾಜಕೀಯಕ್ಕೆ ಬಂದು ಬಿಟ್ಟಿದ್ದಾರೆ. ಹೀರೋ ಆಗುವ ವಯಸ್ಸು ಮುಗಿದು ಹೋಗಿದೆ. ವಿಲನ್ ಆಗೋಕೂ ತಾಕತ್ತು ಇಲ್ಲದಂತಾಗಿದೆ. ಆದರೆ, ಪ್ರಯತ್ನಪಟ್ಟರೆ ನಟನಾಗೋಕೆ ಪೋಷಕ ಪಾತ್ರಗಳು ಸಿಗುತ್ತದೆ ಎಂದರು.

ಇನ್ನು ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾದಲ್ಲಿ ಪ್ರತಿಸ್ಪರ್ಧಿ ಈಗ ಹುಟ್ಕೊಂಡಿದ್ದಾರೆ. ರಿಷಬ್ ಶೆಟ್ಟಿಗೂ ಅವಕಾಶ ಸಿಗದಂತೆ ಡಿಕೆಶಿ ಮಾಡಿದ್ದಾರೆ. ಇನ್ನು ಮುಂದೆ ಪ್ರಶಸ್ತಿ ಏನಿದ್ರೂ ಡಿಕೆಶಿ ಪಾಲಿಗೆ, ಈ ರೀತಿಯ ಕಮೆಂಟ್ಗಳನ್ನ ನಾನು ನೋಡಿದ್ದೇನೆ. ಲೇಟಾಗಿದೆ, ಆದ್ರೂ ಕೂಡ ಕಡೆ ಅವಕಾಶ ಸಿಕ್ಕರೂ ಸಿಗಬಹುದು. ಸಿನಿಮಾದಲ್ಲಿ ನಟಿಸಲು ಡಿಕೆ ಶಿವಕುಮಾರ್ ಟ್ರೈ ಮಾಡೋದು ಒಳ್ಳೆಯದು ಎಂದು ಶಾಸಕ ಸಿ.ಟಿ.ರವಿ ವ್ಯಂಗ್ಯವಾಗಿ ಹೇಳಿದರು.

RELATED ARTICLES

Related Articles

TRENDING ARTICLES