Wednesday, January 22, 2025

ಮೊರಾರ್ಜಿ ದೇಸಾಯಿ ಹಾಸ್ಟೆಲ್​​ನಲ್ಲಿ ಅವ್ಯವಸ್ಥೆಯ ಆಗರ

ಹುಬ್ಬಳ್ಳಿ : ಶಾಲಾ ಮಕ್ಕಳಿಗೆ ಕಳಪೆ ಮಟ್ಟದ ಆಹಾರ ವಿತರಣೆ ಮಾಡಿದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಗಂಜಿಗಟ್ಟಿಯಲ್ಲಿ ನಡೆದಿದೆ.

ನಗರದಲ್ಲಿ, ಪೋಷಕರಿಂದ ಹಾಸ್ಟೆಲ್ ವಾರ್ಡನ್​​​, ಸಿಬ್ಬಂದಿಗೆ ತರಾಟೆಗೆ ತೆಗೆದುಕೊಂಡಿದ್ದು, ಮಕ್ಕಳ ಆಹಾರಕ್ಕಾಗಿ ಸರ್ಕಾರದಿಂದ ಪ್ರತಿ ತಿಂಗಳು ಲಕ್ಷಾಂತರ ರೂ. ಖರ್ಚು ಮಾಡುತ್ತಿದೆ ಆದರೆ ಮಕ್ಕಳಿಗೆ ಗುಣಮಟ್ಟದ ಆಹಾರವನ್ನು ವಾರ್ಡನ್​ ಮಕ್ಕಳಿಗೆ ನೀಡುತ್ತಿಲ್ಲ.

ಇನ್ನು, ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ನೂರಾರು ಮಕ್ಕಳು ವ್ಯಾಸಾಂಗ ಮಾಡುತ್ತಿದ್ದು, ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ಶಾಲೆಯಲ್ಲೇ ಅವ್ಯವಸ್ಥೆ ಉಂಟಾಗಿದೆ. ಇಲಾಖೆಯ ಗೈಡ್ ಲೈನ್ಸ್ ಪ್ರಕಾರ ಊಟ ನೀಡುತ್ತಿಲ್ಲ ಎಂದು ಆರೋಪ ಮಾಡುತ್ತಿದ್ದು, ಕೂಡಲೇ ವಾರ್ಡನ್​​ನ​​​ ವಜಾಗೊಳಿಸಬೇಕೆಂದು ಪೋಷಕರು ಪ್ರತಿಭಟನೆ ಮಾಡಿದ್ದಾರೆ.

RELATED ARTICLES

Related Articles

TRENDING ARTICLES