Monday, December 23, 2024

ಆಫ್ರಿಕಾ ವಿರುದ್ಧದ ಏಕದಿನ ಪಂದ್ಯಕ್ಕೆ ಭಾರತ ತಂಡ ಪ್ರಕಟ; ಧವನ್​ಗೆ ನಾಯಕನ ಪಟ್ಟ

ನವದೆಹಲಿ; ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ T-20 ಸರಣಿಯ ಮುಕ್ತಾಯದ ನಂತರ ಟೀಮ್ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿ ಆಡಲಿದೆ. ಈ ಸರಣಿಯಲ್ಲಿ ಆಡುವ ಭಾರತ ತಂಡವನ್ನ ಬಿಸಿಸಿಐ ಪ್ರಕಟಿಸಿದೆ.

ಭಾರತ ವಿರುದ್ಧದ ಏಕದಿನ ಸರಣಿಗೆ ದಕ್ಷಿಣ ಆಫ್ರಿಕಾವು ತಂಡವನ್ನು ಪ್ರಕಟಿಸಿದೆ. ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಅಕ್ಟೋಬರ್ 06 ರಂದು ಲಕ್ನೋದಲ್ಲಿ ಮೊದಲ ಪಂದ್ಯ ಆಡುತ್ತದೆ. 2 ನೇ ಏಕದಿನ ಪಂದ್ಯ ಅಕ್ಟೋಬರ್ 09 ರಂದು ರಾಂಚಿಯಲ್ಲಿ, ಮೂರನೇ ಏಕದಿನ ಪಂದ್ಯ ಅಕ್ಟೋಬರ್ 11 ನಡೆಯಲಿದೆ.

ದಕ್ಷಿಣ ಆಫ್ರಿಕಾ ಏಕದಿನ ಪಂದ್ಯಕ್ಕೆ ಭಾರತ ತಂಡ ಆಯ್ಕೆ ಪಟ್ಟಿ

ಶಿಖರ್ ಧವನ್ (ನಾಯಕ), ಶ್ರೇಯಸ್ ಅಯ್ಯರ್ (ಉಪ ನಾಯಕ), ರುತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ರಜತ್ ಪಾಟಿದಾರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್), ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ರವಿ ಬಿಷ್ಣೋಯಿ, ಮುಖೇಶ್ ಕುಮಾರ್, ಅವೇಶ್ ಖಾನ್, ಮೊಹಮ್ಮದ್ ಸಿರಾಜ್, ದೀಪಕ್ ಚಹಾರ್.

RELATED ARTICLES

Related Articles

TRENDING ARTICLES