Sunday, February 23, 2025

ಮಹಾತ್ಮ ಗಾಂಧಿ ಪುತ್ಥಳಿಗೆ ‘ರಾಗಾ’ ಪುಷ್ಪ ನಮನ

ನಂಜನಗೂಡು : ಗಾಂಧಿ ಜಯಂತಿ ಅಂಗವಾಗಿ ನಂಜನಗೂಡು ತಾಲೂಕಿನ ಬದನವಾಳು ಖಾದಿ ಮತ್ತು ಗ್ರಾಮೋದ್ಯೋಗ ಕೇಂದ್ರಕ್ಕೆ ಭೇಟಿ ನೀಡಿರುವ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅವರು ಮಹಾತ್ಮ ಗಾಂಧಿ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದರು.

ಗಾಂಧಿ ಜಯಂತಿ ಹಿನ್ನೆಲೆ ಭಾರತ್ ಜೋಡೋ ಪಾದಯಾತ್ರೆಗೆ ಇಂದು ಬೆಳಗ್ಗೆ ಬ್ರೇಕ್​ ನೀಡಲಾಗಿದೆ. ಗಾಂಧಿ ಪುತ್ಥಳಿಗೆ ನಮನ ಸಲ್ಲಿಸಿದ ಬಳಿಕ ಕಾಂಗ್ರೆಸ್ ನಾಯಕರು ಭಜನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಬಳಿಕ ಖಾದಿ ಗ್ರಾಮೋದ್ಯೋಗ ಕೇಂದ್ರಕ್ಕೆ ತೆರಳಿ, ಅಲ್ಲಿನ ಸಿಬ್ಬಂದಿ ಜೊತೆ ರಾಹುಲ್ ಗಾಂಧಿ ಸಂವಾದ ನಡೆಸಿದರು.

ರಾಹುಲ್ ಗಾಂಧಿ ಜೊತೆ D.K.ಶಿವಕುಮಾರ್, ಸಿದ್ದರಾಮಯ್ಯ, ಹರಿಪ್ರಸಾದ್ ಮತ್ತು K.H.ಮುನಿಯಪ್ಪ ಸೇರಿದಂತೆ ಹಲವರು ಇದ್ದರು. ನಂತರ‌ ಬದನವಾಳು ಗ್ರಾಮಕ್ಕೆ ಭೇಟಿ ನೀಡಿ ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3ರವರೆಗೂ ಬದನವಾಳು ಗ್ರಾಮದಲ್ಲಿ ರಾಹುಲ್ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ಮ 3.30ಕ್ಕೆ ಇತಿಹಾಸ ಪ್ರಸಿದ್ಧ ನಂಜನಗೂಡಿನ‌ ನಂಜುಡೇಶ್ವರ ಸನ್ನಧಿಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ, ಸಂಜೆ ನಾಲ್ಕು ಗಂಟೆಗೆ ಎಂದಿನಂತೆ ತಾಂಡವಪುರದಿಂದ ಪಾದಯಾತ್ರೆ ಆರಂಭ ಮಾಡಲಿದ್ದಾರೆ.

RELATED ARTICLES

Related Articles

TRENDING ARTICLES