Saturday, January 4, 2025

ಹೊಸಬಾಳೆ ಹೇಳಿಕೆ ಭಾರತ ಸ್ಥಿತಿಯ ಕನ್ನಡಿ : ಹೆಚ್​ಡಿಕೆ

ಬೆಂಗಳೂರು : RSS ಮುಖಂಡ ದತ್ತಾತ್ರೇಯ ಹೊಸಬಾಳೆ ಹೇಳಿಕೆಗೆ ಪ್ರತಿಕ್ರಿಯಿಸಿ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದಾರೆ.

ಆರ್ಥಿಕ ಅಸಮಾನತೆ, ಬಡತನ, ನಿರುದ್ಯೋಗ ಅತ್ಯಂತ ಅಪಾಯಕಾರಿ. RSS​ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ದತ್ತಾತ್ರೇಯ ಹೊಸಬಾಳೆ ಅವರು ನೀಡಿರುವ ಈ ಹೇಳಿಕೆ ಭಾರತದ ಸದ್ಯದ ಸ್ಥಿತಿಗೆ ಹಿಡಿದ ಕನ್ನಡಿ. ಈಗ ಅಚ್ಛೇ ದಿನದ ಅಸಲಿಯತ್ತಿನ ಬಗ್ಗೆ ದೊಡ್ಡ ಪ್ರಶ್ನೆಯೇ ಮೂಡಿದೆ. ಕಳೆದ 7 ವರ್ಷದ ಬಿಜೆಪಿ ಆಡಳಿತದಲ್ಲಿ ಯಾರು ಉದ್ಧಾರ ಆಗಿದ್ದಾರೆ, ಯಾರು ಹಾಳಾಗಿದ್ದಾರೆ ಎನ್ನುವುದನ್ನು ಹೇಳಲು ವಿಶೇಷ ಪಾಂಡಿತ್ಯವೇನೂ ಬೇಕಿಲ್ಲ.

20 ಕೋಟಿ ಜನ ಬಡತನ ರೇಖೆಗಿಂತ ಕೆಳಗಿದ್ದಾರೆ. 4 ಕೋಟಿ ಯುವಕರಿಗೆ ಉದ್ಯೋಗವೇ ಇಲ್ಲ ಎಂದು ಹೊಸಬಾಳೆ ಅವರೇ ಹೇಳಿದ್ದಾರೆ. ಹಾಗಾದರೆ, ಕಳೆದ 7 ವರ್ಷಗಳಲ್ಲಿ ಶ್ರೀಮಂತರಾದವರು ಯಾರು? ಇದು ಸದ್ಯದ ಭಾರತದ ಚಿತ್ರಣ. ದೇಶದ ಶೇ.20ರಷ್ಟು ಆದಾಯ ಶೇ.1ರಷ್ಟು ಜನರ ಕೈಯ್ಯಲ್ಲಿದೆ ಎಂದರೆ ಇದಕ್ಕಿಂತ ಆಘಾತಕಾರಿ ಸಂಗತಿ ಮತ್ತೊಂದು ಇದೆಯಾ? ಇದು ಹೊಸಬಾಳೆ ಅವರ ಪ್ರಶ್ನೆ. ಭಾರತದ ಉದ್ದಗಲಕ್ಕೂ ಅಪೌಷ್ಠಿಕತೆ ತಾಂಡವವಾಡುತ್ತಿದೆ. ಸಮೀಕ್ಷೆಗಳು ಹೇಳಿದ ಸತ್ಯವನ್ನೇ ಹೊಸಬಾಳೆ ಅವರು ಹೇಳಿದ್ದಾರೆ ಎಂದು HDK ಟ್ವೀಟ್ ಮಾಡಿದ್ದಾರೆ.

RELATED ARTICLES

Related Articles

TRENDING ARTICLES