Wednesday, January 22, 2025

ಮೂರು ದಿನಕ್ಕೆ ‘ಕಾಂತಾರ’ ಬಾಕ್ಸ್ ಆಫೀಸ್ ಎಷ್ಟು ಗೊತ್ತಾ ಸಿನಿ ಲೆಕ್ಕಾಚಾರ

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ದಿನದಿಂದ ದಿನಕ್ಕೆ ತನ್ನ ಗಳಿಕೆಯನ್ನು ಹೆಚ್ಚಿಸಿಕೊಳ್ಳುತ್ತಿದೆ. ಅದೇ ರೀತಿಯಲ್ಲಿ ಥಿಯೇಟರ್​ಗಳಲ್ಲಿ ನೋಡುಗರ ಸಂಖ್ಯೆಯೂ ಹೆಚ್ಚಾಗುತ್ತಿವೆ. ಹಾಗಾಗಿ ಬಾಕ್ಸ್ ಆಫೀಸಿನಲ್ಲಿ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಶುಕ್ರವಾರ ಕಡಿಮೆ ಸಂಖ್ಯೆಯ ಥಿಯೇಟರ್ ನಲ್ಲಿ ಚಿತ್ರ ಬಿಡುಗಡೆ ಆಗಿತ್ತು.

ಸಿನಿಮಾ ತಂಡವೇ ಹೇಳಿಕೊಂಡಂತೆ ರಿಷಬ್ ಶೆಟ್ಟಿ ಅವರ ಈವರೆಗಿನ ಸಿನಿಮಾಗಳಿಗಿಂತಲೂ ಈ ಚಿತ್ರಕ್ಕೆ ಹೆಚ್ಚು ಹಣ ಬಂದಿದೆಯಂತೆ. ಅದರಲ್ಲೂ ಮೊದಲ ಮೂರು ದಿನಗಳಲ್ಲೂ ಅತೀ ಹೆಚ್ಚು ಹಣ ಮಾಡಿದೆ, ಹಾಗಾಗಿ ಸಹಜವಾಗಿಯೇ ಚಿತ್ರತಂಡ ಖುಷಿಯಲ್ಲಿದೆ. ಮೂರು ದಿನಗಳ ಕಾಲ ಬಹುತೇಕ ಕಡೆ ಹೌಸ್ ಫುಲ್ ಪ್ರದರ್ಶನ ಕಂಡಿದೆ.

ಸ್ಯಾಂಡಲ್​​ವುಡ್ ಟ್ರೇಡ್ ಅನಲಿಸ್ಟ್ ಗಳ ಪ್ರಕಾರ ಈ ಸಿನಿಮಾ ರಿಲೀಸ್ ಆದ ದಿನ (ಶುಕ್ರವಾರ) 5 ರಿಂದ 6 ಕೋಟಿ ರೂಪಾಯಿ ಬಂದಿದೆ ಎಂದು ಹೇಳಲಾಗಿತ್ತು. ಎರಡನೇ ದಿನ (ಶನಿವಾರ) 8 ಕೋಟಿ, ಮೂರನೇ ದಿನ (ರವಿವಾರ) 10 ಕೋಟಿ ಬಾಕ್ಸ್ ಆಫೀಸಿಗೆ ಹರಿದು ಬಂದಿದೆ ಎಂದು ಹೇಳಲಾಗುತ್ತಿದೆ. ಮೂರನೇ ದಿನಕ್ಕೆ 23 ಕೋಟಿಗೂ ಅಧಿಕ ಹಣ ಬಂದಿದೆ ಎಂದು ಅಂದಾಜಿಸಲಾಗಿದೆ.

ರಿಷಬ್ ಶೆಟ್ಟಿ ನಿರ್ದೇಶಿಸಿ, ಈ ಸಿನಿಮಾದಲ್ಲಿ ನಟಿಸಿದ್ದು, ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿದೆ. ಅಚ್ಯುತ್ ಕುಮಾರ್ ಪ್ರಮೋದ್ ಶೆಟ್ಟಿ ಸೇರಿದಂತೆ ಹಲವರು ತಾರಾಗಣದಲ್ಲಿ ಇದ್ದು, ಅದ್ದೂರಿಯಾಗಿಯೇ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ ವಿಜಯ್ ಕಿರಗಂದೂರ್, ತೆಲುಗಿನ ಪ್ರಭಾಸ್ ಸೇರಿದಂತೆ ಅನೇಕ ಸ್ಟಾರ್ ನಟರು ಈ ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ.

RELATED ARTICLES

Related Articles

TRENDING ARTICLES