Wednesday, January 22, 2025

ಮಗನ ಮಾತು ಕೇಳಿ ಅಧಿಕಾರ ನಡೆಸಬಾರದು: ಬಸನಗೌಡ ಯತ್ನಾಳ್

ವಿಜಯನಗರ : ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್ ಆಗಿದ್ದರೆ ಅದು ಬಿ.ವೈ. ವಿಜಯೇಂದ್ರನಿಂದ ಎಂದು ವಿಜಯಪುರದಲ್ಲಿ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಆರೋಪ ಮಾಡಿದ್ದಾರೆ.

ವಿಜಯೇಂದ್ರನಿಂದ ಬಿಜೆಪಿಯ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್​.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿದ್ದಾರೆ. ಇಲ್ಲದಿದ್ದರೆ ಯಡಿಯೂರಪ್ಪ ಸಿಎಂ ಸ್ಥಾನದಲ್ಲೇ ಮುಂದುವರಿಯುತ್ತಿದ್ದರು. ವಿಜಯೇಂದ್ರ ಹಗರಣ ಮಾಡಿದಾಗಲೆಲ್ಲ ಬಿಎಸ್​ವೈ ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದರು.

ಇನ್ನು, ವಿಜಯೇಂದ್ರ ಭ್ರಷ್ಟಾಚಾರದಿಂದ ಬಿಜೆಪಿ ಪಕ್ಷದ ಹೆಸರು ಕೆಟ್ಟಿದೆ. ಯಡಿಯೂರಪ್ಪ ಜೈಲಿಗೆ ಹೋಗಿ ಬರಲು ವಿಜಯೇಂದ್ರ ಕಾರಣ. ಮಗನ ಮಾತು ಕೇಳಿ ಅಧಿಕಾರ ನಡೆಸಬಾರದು. ಬಿ.ಎಸ್.ಯಡಿಯೂರಪ್ಪ ಒಳ್ಳೆಯವರು ಇದ್ದಾರೆ ಎಂದು ಹೇಳಿದ್ದಾರೆ. ಪಿಎಸ್​ಐ ನೇಮಕಾತಿ ಹಗರಣದ ತನಿಖೆ ಸಿಬಿಐಗೆ ವಹಿಸಿ. ಇಡೀ ಪ್ರಕರಣದಲ್ಲಿ ಮಾಜಿ ಸಿಎಂ ಪುತ್ರನ ಕೈವಾಡವಿದೆ. ಇದನ್ನೇ ಮಾಜಿ ಸಿಎಂ ಹೆಚ್​​​.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಮಾಜಿ ಸಿಎಂ ಪುತ್ರನ ಕೈವಾಡದ ಬಗ್ಗೆ ನನಗೆ 10 ಬಾರಿ ನನಗೆ ಪ್ರಶ್ನೆ ಕೇಳಿದ್ದಾರೆ. ಸಿಬಿಐ ತನಿಖೆಗೆ ವಹಿಸಿದರೆ ಯಾರು ಕಳ್ಳ ಎಂದು ಗೊತ್ತಾಗಲಿದೆ ಎಂದು ಒತ್ತಾಯಿಸಿದರು.

RELATED ARTICLES

Related Articles

TRENDING ARTICLES