Sunday, January 26, 2025

ಕಾಲುವೆಗೆ ಜಿಗಿದು ಬಸ್ ಚಾಲಕ ಆತ್ಮಹತ್ಯೆ

ವಿಜಯಪುರ : ಕೌಟುಂಬಿಕ ಕಲಹದಿಂದ ಮನನೊಂದು KSRTC ಬಸ್ ಚಾಲಕ ಕಾಲುವೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಭೈರವಾಡಗಿ ಗ್ರಾಮದಲ್ಲಿ ನಡೆದಿದೆ.

42 ವರ್ಷದ ಗಂಗಾಧರ ಕೃಷ್ಣಪ್ಪ ಬಡಿಗೇರ ಆತ್ಮಹತ್ಯೆಗೆ ಶರಣಾದ ಬಸ್ ಚಾಲಕನಾಗಿದ್ದು, ಸಿಂದಗಿ ಬಸ್ ಡಿಪೋದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಭೈರವಾಡಗಿ ಗ್ರಾಮದ ಬಳಿಯ ಚಿಮ್ಮಲಗಿ ಏತ ನೀರಾವರಿ ಕಾಲುವೆಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಬಸವನ ಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES