Monday, December 23, 2024

ದಕ್ಷಿಣ ಆಫ್ರಿಕಾ ವಿರುದ್ಧದ ಇಂದಿನ ಟಿ-20 ಪಂದ್ಯಕ್ಕೆ ವಿರಾಟ್​​ಗೆ ವಿಶ್ರಾಂತಿ

ಬೆಂಗಳೂರು: ಸೆ.4 (ಇಂದು) ರಂದು ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ-20 ಪಂದ್ಯಕ್ಕೆ ಮಾಜಿ ನಾಯಕ ವಿರಾಟ್​ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.

ಈಗಾಗಲೇ ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಯನ್ನ ಭಾರತ ತನ್ನ ಕೈವಶ ಪಡೆದ ಹಿನ್ನಲೆಯಲ್ಲಿ ವಿರಾಟ್​ಗೆ ವಿಶ್ರಾಂತಿ ನೀಡಲಾಗಿದೆ. ಭಾನುವಾರ ಗುವಾಹಟಿಯಲ್ಲಿ ನಡೆದ ಸರಣಿ ಗೆಲುವಿನ ನಂತರ ಕೊಹ್ಲಿ ಸೋಮವಾರ ಬೆಳಗ್ಗೆ ಮುಂಬೈಗೆ ಹೋಗಿದ್ದಾರೆ. ಅಂತಿಮ ಟಿ20 ಪಂದ್ಯದಿಂದ ಅವರಿಗೆ ವಿಶ್ರಾಂತಿ ನೀಡಲಾಗಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಟಿ-20 ಪಂದ್ಯದಲ್ಲಿ ವಿರಾಟ್​ 28 ಎಸೆತಗಳಲ್ಲಿ ಅಜೇಯ 49 ರನ್ ಗಳಿಸಿದರು, ಭಾರತವು ಎರಡನೇ T-20 ಪಂದ್ಯವನ್ನ 16 ರನ್‌ಗಳಿಂದ ಗೆದ್ದು ಮೂರು ಪಂದ್ಯಗಳ ಸರಣಿಯಲ್ಲಿ 2-0 ದಿಂದ ಮುನ್ನಡೆ ಸಾಧಿಸಿದೆ.

RELATED ARTICLES

Related Articles

TRENDING ARTICLES