Wednesday, January 22, 2025

ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ ರಾಜ್ಯ ಸರ್ಕಾರ 4 ಕೋಟಿ ರೂ ಘೋಷಣೆ

ಬೆಂಗಳೂರು: ಕರ್ನಾಟಕದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ, ರಾಜ್ಯ ಸರಕಾರ ಒಟ್ಟು ಎಂಟು ಕೋಟಿ ರೂ ಅನುದಾನ ನಿಗದಿ ಮಾಡಿ, ನಾಲ್ಕು ಕೋಟಿ ರೂಪಾಯಿಗಳನ್ನು ತಕ್ಷಣಕ್ಕೆ ರೈತರಿಗೆ ವಿತರಿಸಲು ಬಿಡುಗಡೆ ಮಾಡಲಾಗಿದೆ ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ರಾಜ್ಯದ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮತ್ತು ಕೊಡಗು, ಹಾಸನ ಜಿಲ್ಲೆಯಲ್ಲಿ ಒಟ್ಟು ಇಪ್ಪತ್ತು ಸಾವಿರ ಹೆಕ್ಟೇರ್ ಅಡಿಕೆ ಬೆಳೆ ಪ್ರದೇಶದಲ್ಲಿ ಎಲೆ ಚುಕ್ಕೆ ರೋಗ ಹಬ್ಬಿದ್ದು, ಇದರ ನಿಯಂತ್ರಣ ಬಗ್ಗೆ ತೋಟಗಾರಿಕೆ ಇಲಾಖೆ ಔಷಧಿ ಹಾಗೂ ಸಿಂಪರಣೆ ವೆಚ್ಚ ಭರಿಸಲು ಅನುದಾನ ಬಿಡುಗಡೆ ಗೊಳಿಸಿದ್ದು, ರೈತ ಬಾಂಧವರು ಇದರ ಸದುಪಯೋಗ ಪಡೆಯಬೇಕು ಎಂದು  ಆರಗ ವಿನಂತಿಸಿದ್ದಾರೆ.

ರೋಗ ನಿಯಂತ್ರಣಕ್ಕೆ, ಉತ್ತಮ ಗುಣ ಮಟ್ಟದ ಸಸ್ಯ ಸಂರಕ್ಷಣೆ ಔಷಧ ಕೊಳ್ಳಲು, ಪ್ರತಿ ಹೆಕ್ಟೇರ್ ಗೆ, 4000 ರೂಪಾಯಿ ಅನುದಾನವನ್ನು, ಮೊದಲ ಸಿಂಪರಣೆಗಾಗಿ 1.5 ಹೆಕ್ಟೇರ್ ತೋಟಗಾರಿಕಾ ಪ್ರದೇಶ ಮಿತಿಗೊಳಪಟ್ಟು ರೈತರಿಗೆ, ಅನುದಾನ ಒದಗಿಸಲಾಗುವುದು.

ಕಳೆದ ವಾರ ಗೃಹ ಸಚಿವ ಆರಗ ಜ್ಞಾನೇಂದ್ರ ರವರು, ತೋಟಗಾರಿಕಾ ಸಚಿವ ಮುನಿರತ್ನ, ಮೀನುಗಾರಿಕೆ ಸಚಿವ ಅಂಗಾರ ಅವರೊಂದಿಗೆ ಸಭೆ ನಡೆಸಿ ರೋಗ ನಿಯಂತ್ರಣದ ಅಗತ್ಯದ ಬಗ್ಗೆ ಚರ್ಚಿಸಿದ್ದರು. ಸುಮಾರು 20000 ಹೆಕ್ಟೇರ್ ಅಡಿಕೆ ಬೆಲೆ ಪ್ರದೇಶದಲ್ಲಿ ಎಲೆ ಚುಕ್ಕೆ ರೋಗ ಭಾದಿಸುತ್ತಿದ್ದು ರೈತರಲ್ಲಿ ಆತಂಕ ಮೂಡಿಸಿದೆ. ರೋಗ ನಿಯಂತ್ರಣಕ್ಕೆ ಒಟ್ಟು ಎಂಟು ಕೋಟಿ ರೂಪಾಯಿಗಳ ಅನುದಾನದ ಅಗತ್ಯವಿದೆ ಎಂದು ತೋಟಗಾರಿಕಾ ತಜ್ಞರು, ಶಿಫಾರಸು ಮಾಡಿದ್ದಾರೆ ಎಂದರು.

RELATED ARTICLES

Related Articles

TRENDING ARTICLES