ನವದೆಹಲಿ: ಭಾರತ-ದಕ್ಷಿಣ ಆಫ್ರಿಕಾ ನಡುವೆ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಸರಣಿ ಇಂದಿನಿಂದ ಆರಂಭವಾಗಲಿದೆ.
ಲಖ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಮೈದಾನದಲ್ಲಿ ಭಾರತೀಯ ಕಾಲಮಾನ ಇಂದು ಮಧ್ಯಾಹ್ನ 1;30ಕ್ಕೆ ಮೊದಲ ಏಕದಿನ ಪಂದ್ಯ ಆರಂಭಗೊಳ್ಳಲಿದ್ದು, ಎರಡನೇ ಪಂದ್ಯ ಅಕ್ಟೋಬರ್ 9 ರಂದು ರಾಂಚಿಯಲ್ಲಿ ಹಾಗೂ ಮೂರನೇ ಏಕದಿನ ಪಂದ್ಯ ಅ.11 ರಂದು ದೆಹಲಿಯಲ್ಲಿ ನಡೆಯಲಿವೆ.
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾವನ್ನ ಶಿಖರ್ ಧವನ್ ನಾಯಕನಾಗಿ ಮುನ್ನಡೆಸಲಿದ್ದಾರೆ. ಶ್ರೇಯಸ್ ಅಯ್ಯರ್ ಅವರಿಗೆ ಉಪನಾಯಕನ ಜವಾಬ್ದಾರಿಯನ್ನು ನೀಡಲಾಗಿದೆ. ಇನ್ನು ಈ ಪಂದ್ಯಕ್ಕೆ ಮಳೆಯ ಭೀತಿಯ ಕರಿನೆರಳು ಬೀರಿದೆ. ನಿನ್ನಿ ಈ ಮೈದಾನದಲ್ಲಿ ಮಳೆಯಾಗಿದ್ದು, ಗುರುವಾರ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದೆ ಎಂದು ವರಿಯಾಗಿವೆ.
ಧವನ್ ನಾಯಕನಲ್ಲದೇ ತಂಡದ ಪ್ರಮುಖ ಬ್ಯಾಟ್ಸ್ಮನ್ ಆಗಿ ಕಣಕ್ಕಿಳಿಯಲಿದ್ದಾರೆ. ಧವನ್ ಕಳೆದೆರಡು ವರ್ಷಗಳಲ್ಲಿ ಅತ್ಯಂತ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡುತ್ತಾ ಬಂದಿರುವ ಆಟಗಾರರ ಪೈಕಿ ಒಬ್ಬರಾಗಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಭಾರತ ತಂಡ
ಶಿಖರ್ ಧವನ್ (ನಾಯಕ), ಋತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್ (ಉಪನಾಯಕ), ರಜತ್ ಪಾಟಿದಾರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್ , ರವಿ ಬಿಷ್ಣೋಯ್, ಮುಕೇಶ್ ಕುಮಾರ್, ಆವೇಶ್ ಖಾನ್, ಮೊಹಮ್ಮದ್ ಸಿರಾಜ್, ದೀಪಕ್ ಚಹಾರ್.