Monday, December 23, 2024

ಟ್ರಕ್‌-ಬಸ್ ನಡುವೆ ಡಿಕ್ಕಿ; 11 ಮಂದಿ ಸಜೀವ ದಹನ.!

ಮಹಾರಾಷ್ಟ್ರ; ಇಂದು ಬೆಳ್ಳಂ ಬೆಳಿಗ್ಗೆ ಮಹಾರಾಷ್ಟ್ರದ ನಾಸಿಕ್‌ನ ಔರಂಗಾಬಾದ್​​ನಲ್ಲಿ ಬಸ್‌ ಬೆಂಕಿ ಹೊತ್ತಿಕೊಂಡ ಪರಿಣಾಮವಾಗಿ 11 ಮಂದಿ ಸಾವನ್ನಪ್ಪಿದ್ದು, 38 ಜನ ಗಂಭೀರ ಗಾಯಗೊಂಡಿದ್ದಾರೆ.

ನಾಸಿಕ್‌ನಿಂದ ಪುಣೆಗೆ ತೆರಳುತ್ತಿದ್ದ ಟ್ರಕ್‌ಗೆ ಯವತ್ಮಾಲ್‌ನಿಂದ ಮುಂಬೈಗೆ ಬರುತ್ತಿದ್ದ ಬಸ್ ಡಿಕ್ಕಿ ಹೊಡೆದ ಪರಿಣಾಮವಾಗಿ 11 ಜನರು ಸಾವನ್ನಪ್ಪಿದ್ದಾರೆ. 38 ಮಂದಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳಿಗೆ ನಾಸಿಕ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಎಲ್ಲಾ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ.

ಬೆಂಕಿಗೆ ಆಹುತಿಯಾದವರಲ್ಲಿ ಹೆಚ್ಚಿನವರು ಬಸ್​ನಲ್ಲಿದ್ದ ಪ್ರಯಾಣಿಕರೆಂದು ಹೇಳಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಅಗ್ನಿಶಾಮಕ ಅಧಿಕಾರಿಗಳು ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟರು.

ಇನ್ನು ಅಪಘಾತದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಘೋಷಿಸಿದ್ದಾರೆ.

RELATED ARTICLES

Related Articles

TRENDING ARTICLES