Sunday, November 3, 2024

14 ದಿನಗಳ ಬಳಿಕ ಹಲ್ಲೆಗೊಳಗಾದ CPIಯನ್ನ ಭೇಟಿಯಾದ ಗೃಹ ಸಚಿವ ಆರಗ ಜ್ಞಾನೇಂದ್ರ.!

ಕಲಬುರಗಿ; ಇತ್ತೀಚಿಗೆ ಜಿಲ್ಲೆಯ ಕಮಲಾಪುರ ಠಾಣೆಯ ಸಿಪಿಐ ಶ್ರೀಮಂತ್ ಇಲ್ಲಾಳ್‌ ಮೇಲೆ ಗಾಂಜಾ ದಂಧೆಕೋರರಿಂದ ಹಲ್ಲೆ ಪ್ರಕರಣ ಹಿನ್ನಲೆಯಲ್ಲಿ ಗಾಯಾಳು ಇಲ್ಲಾಳ್‌ ಅವರನ್ನ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಗಾಂಜಾ ಮಾರಾಟಗಾರ ಸಂತೋಷ್​ನನ್ನು ಪೊಲೀಸರು ಬಂಧಿಸಿದ್ದರು. ಆರೋಪಿಯ ಮಾಹಿತಿ ಮೇರೆಗೆ ಮಹಾರಾಷ್ಟ್ರದ ಉಮ್ಮರ್ಗಾ ತಾಲೂಕಿನ ತರೂರಿ ಬಳಿ ಗಾಂಜಾ ಬೆಳೆಯುತ್ತಿದ್ದ ಗ್ಯಾಂಗ್ ಪತ್ತೆ ಮಾಡಲು ಶ್ರೀಮಂತ ಇಲ್ಲಾಳ್ ಹಾಗೂ ಸಿಬ್ಬಂದಿ ಹೋಗಿದ್ದರು. ಈ ವೇಳೆ ರಾತ್ರಿ ಸಮಯದಲ್ಲಿ ದಿಢೀರನೆ ನಲವತ್ತು ಜನರ ತಂಡ ಸಿಪಿಐ ಶ್ರೀಮಂತ ಇಲ್ಲಾಳ ಮೇಲೆ ದಾಳಿ ಮಾಡಿ ಗಂಭೀರ ಗಾಯಗೊಳಿಸಿದ್ದರು.

ಈ ಘಟನೆ ನಡೆದು 14 ದಿನಗಳ ಬಳಿಕ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸಿಪಿಐನ್ನ ಭೇಟಿಯಾಗಿದ್ದಾರೆ. ಸದ್ಯ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಲ್ಲಾಳ್​ ಚಿಕಿತ್ಸೆ ಪಡೆಯುತ್ತಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ.

ಕಳೆದ ಸೆ. 26 ರಂದು ಕಲಬುರಗಿಯಿಂದ ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಗೆ ಸಿಪಿಐ ಇಲ್ಲಾಳ್‌ರ‌ನ್ನ ಏರ್‌ಲಿಫ್ಟ್ ಮಾಡಲಾಗಿತ್ತು. ಗಾಂಜಾ ಅಡ್ಡೆ ಮೇಲೆ ದಾಳಿಗೆ ತೆರಳಿದ್ದಾಗ ಸಿಪಿಐ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು.

RELATED ARTICLES

Related Articles

TRENDING ARTICLES