Monday, December 23, 2024

ಕೇಜ್ರಿವಾಲ್​ ಸಂಪುಟದ ವಿಕೆಟ್​ ಪತನ; ಸಮಾಜ ಕಲ್ಯಾಣ ಸಚಿವ ರಾಜೀನಾಮೆ

ನವದೆಹಲಿ: ಶುಕ್ರವಾರದಂದು ದೆಹಲಿಯಲ್ಲಿ ನಡೆದ ಧಾರ್ಮಿಕ ಮತಾಂತರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಕ್ಕೆ ಪ್ರತಿಭಟನೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ದೆಹಲಿ ಸಮಾಜ ಕಲ್ಯಾಣ ಸಚಿವ ರಾಜೇಂದ್ರ ಪಾಲ್ ಗೌತಮ್ ರಾಜೀನಾಮೆ ನೀಡಿದ್ದಾರೆ.

ಈ ಹಿಂದೆ ಆಮ್ ಆದ್ಮಿ ಪಕ್ಷದ ಸಚಿವರು ಹಿಂದೂ ದೇವತೆಗಳನ್ನು ಖಂಡಿಸಿದ ಧಾರ್ಮಿಕ ಮತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದನ್ನು ತೋರಿಸುವ ವೀಡಿಯೊ ವೈರಲ್ ಆಗಿತ್ತು.

ಈ ಕಾರ್ಯಕ್ರಮದಲ್ಲಿ ನೂರಾರು ಮಂದಿ ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳುವುದಾಗಿ ಮತ್ತು ಹಿಂದೂ ದೇವತೆಗಳನ್ನು ದೇವರೆಂದು ಪರಿಗಣಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದರು. ಈ ಹಿನ್ನಲೆಯಲ್ಲಿ ಹಲವು ಪ್ರತಿಭಟನೆ ನಡೆದಿದ್ದವು.

ಘಟನೆಯ ನಂತರ, ಬಿಜೆಪಿಯು ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ದಾಳಿ ನಡೆಸಿ ಗೌತಮ್ ಅವರನ್ನು ವಜಾ ಮಾಡುವಂತೆ ಆಗ್ರಹಿಸಿತ್ತು.

RELATED ARTICLES

Related Articles

TRENDING ARTICLES